ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಕಾನೂನಿನ ಅಡಿಯಲ್ಲಿ ಕಠಿಣವಾಗಿ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಗಲಭೆಯು ಪೂರ್ವ ನಿಯೋಜಿತವಾಗಿದ್ದು ಇದೊಂದು ಷಡ್ಯಂತ್ರವಾಗಿದೆ. ಈ ಗಲಭೆಗೆ ಪೂರ್ವತಯಾರಿ ನಡೆಸಿ ಪೊಲೀಸ್ ಸಿಬ್ಬಂದಿಗಳ ಮೇಲೆ, ಆಸ್ಪತ್ರೆಯ ಮೇಲೆ ಹಾಗೂ ಹನುಮಾನ್ ದೇವಾಲಯದ ಮೇಲೆ ಕಲ್ಲು ತೂರಾಟ ನಡೆಸಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದು ಈ ಕಾರ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಬಜರಂಗದಳದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. 



ಈ ಕುರಿತು ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿರುವ ಅವರು ಉತ್ತರ ಪ್ರದೇಶದ ಸರ್ಕಾರದ ನಿರ್ಣಯದಂತೆ ಅವರಿಗೆ ಸಂಬಂಧಿಸಿದ ಕಟ್ಟಡಗಳನ್ನು ಮುಟ್ಟುಗೋಲು ಹಾಕಿ, ಮುಂದಿನ ದಿನಗಳಲ್ಲಿ ಈ ರೀತಿಯ ಯಾವುದೇ ಘಟನೆಗಳು ಮರುಕಳಿಸದ ರೀತಿಯಲ್ಲಿ ನಿರ್ಣಯಗಳನ್ನು ಕೈಗೊಳ್ಳುಬೇಕಿದೆ ಎಂದು ಮನವಿಯ ಮುಖೇನ ಸರ್ಕಾರವನ್ನು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಯೋಗೇಶ್ ರಾಜ ಅರಸು, ವಿಶ್ವಹಿಂದೂ ಪರಿಷತ್ ಜಿಲ್ಲಾ ಸಹಕಾರ್ಯದರ್ಶಿ ರಂಗನಾಥ್, ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷರಾದ ಆಟೋ ಶಿವಣ್ಣ, ವಿಶ್ವ ಹಿಂದೂ ಪರಿಷತ್ ನಗರ ಉಪಾಧ್ಯಕ್ಷ ದೇವು, ಬಜರಂಗದಳ ಜಿಲ್ಲಾ ವಿದ್ಯಾರ್ಥಿ ಪ್ರಮುಖ್ ಗುರುಕಿರಣ್, ಬಜರಂಗದಳ ನಗರ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.



ನರಸಿಂಹರಾಜಪುರ : ಅರಣ್ಯ ಇಲಾಖೆಯ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿರುವ ದುರ್ಘಟನೆ ಸಂಭವಿಸಿದೆ. 

ಚಿಕ್ಕಮಗಳೂರು ಜಿಲ್ಲೆಯ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶ್ರೀ ಮಠ ಹಾಗೂ ಹರಿಹರಪುರ ಮಠಕ್ಕೆ ಶ್ರೀಗಳ ಆಗಮನದ ಹಿನ್ನೆಲೆ ಇಲಾಖೆಯ ಅನೇಕ ವಾಹನಗಳನ್ನು ಬಳಸಿಕೊಳ್ಳಲಾಗಿತ್ತು ಅದರಂತೆಯೇ ನರಸಿಂಹರಾಜಪುರದ ಅರಣ್ಯ ಇಲಾಖೆಯ ಬೊಲೆರೋ ವಾಹನವನ್ನು ಕೂಡ ಬಳಸಿಕೊಳ್ಳಲಾಗಿತ್ತು. 


ವಾಹನಕ್ಕೆ ಇಂಧನ ಪೂರೈಕೆ ಮಾಡಿಕೊಂಡು ಕೊಪ್ಪದ ಕಡೆಗೆ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಉರುಳಿದೆ, ಪರಿಣಾಮ ವಾಹನ ಚಾಲಕನ ತಲೆಯ ಭಾಗಕ್ಕೆ ಗಾಯವಾಗಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಚಿಕ್ಕಮಗಳೂರು ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆಗಳ ಜೊತೆಗೂಡಿ ಶೃಂಗೇರಿ ಕೊಪ್ಪ ನರಸಿಂಹರಾಜಪುರ ತಾಲೂಕುಗಳ ಪ್ರತಿಭಾವಂತರಿಗೆ ಉದ್ಯೋಗ ಮೇಳದ ಆಯೋಜನೆ ಗೊಳಿಸಿ ಅವರನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವುದಾಗಿ ತಿಳಿಸಿದರು. 


ಈ ಉದ್ಯೋಗ ಮೇಳದಲ್ಲಿ 80ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಮೂರು ಸಾವಿರಕ್ಕೂ ಅಧಿಕ ಉದ್ಯೋಗಕಾಂಕ್ಷಿಗಳಿಗೆ ಉದ್ಯೋಗ ನೀಡಲಿದ್ದು ಮಲೆನಾಡಿನ ಯುವಜನತೆ ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದರು.