ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ ಏಳು ಜನರನ್ನು ಸಿ.ಇ.ಎನ್ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. 

ಇದನ್ನೂ ಓದಿ : ಶಾಸಕ ಟಿ.ಡಿ ರಾಜೇಗೌಡ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಶೃಂಗೇರಿ ಯುವಕರು

ಚಿಕ್ಕಮಗಳೂರು ನಗರದ ಉಂಡೆ ದಾಸರಹಳ್ಳಿಯಿಂದ ಉಪ್ಪಳ್ಳಿಗೆ ತೆರಳುವ ಕಾಲುದಾರಿಯಲ್ಲಿ ಜೂಜಾಟ ಆಡುತ್ತಿದ್ದ ಏಳು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸುತ್ತಿದ್ದ 22,930 ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯನ್ನು ನಡೆಸಿದ ಚಿಕ್ಕಮಗಳೂರಿನ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆ ಮತ್ತು ತಂಡ ದಾಳಿನಡೆಸಿ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡು ಬಂದಲ್ಲಿ ಮುಂದಿನ ದಿನಗಳಲ್ಲಿ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂಬ ಎಚ್ಚರಿಕೆಯನ್ನು ಪೊಲೀಸ್ ಅಧಿಕಾರಿಗಳು ನೀಡಿದ್ದಾರೆ. 

ಈ ಪ್ರಕರಣದ ಸಂಬಂಧ ತನಿಖೆ ನಡೆಯುತ್ತಿದ್ದು ಆರೋಪಿಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.