ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆ ಚಿಕ್ಕಮಗಳೂರಿನ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿ ಪರೀಕ್ಷಾ ಕೊಠಡಿಗಳ ಪರಿಶೀಲನೆ ನಡೆಸಿದರು.
ಇದನ್ನೂ ಓದಿ : ಮೂರು ದಿನಗಳಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿ 9671 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಚಿಕ್ಕಮಗಳೂರು ನಗರದ ಜೂನಿಯರ್ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಕೊಠಡಿಗಳ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ವೃದ್ಧಿಸುವಂತೆ ಮಾತನಾಡಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಒಳಿತಾಗಲಿ ಎಂದು ಶುಭ ಹಾರೈಸಿದರು.
ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಅಲ್ಲಿನ ಸಿಬ್ಬಂದಿಗಳ ಜೊತೆಗೆ ಮಾತನಾಡಿದ ಅವರು ಯಶಸ್ವಿಯಾಗಿ ಈ ಪರೀಕ್ಷೆಯನ್ನು ನಿರ್ವಹಣೆ ಮಾಡುವಂತೆ ಸೂಚಿಸಿದರು ಹಾಗೂ ಅವರ ಅವಶ್ಯಕತೆಗಳ ಕುರಿತು ಆಲಿಸಿದರು.
ಈ ಬಾರಿ 4597 ಬಾಲಕರು ಹಾಗೂ 5074 ಬಾಲಕಿಯರು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಹದಿನೆಂಟು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ರಾಜ್ಯದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರೊಂದಿಗೆ ಜಿಲ್ಲಾಧಿಕಾರಿಗಳಾದ ಕೆ.ಎನ್ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು.
ತನು ಕೊಟ್ಟಿಗೆಹಾರ, ವರದಿಗಾರರು
ಅಣ್ಣಪ್ಪ ಸ್ವಾಮಿ ದೇವಸ್ಥಾನದ ಹುಂಡಿಯಿಂದ ಹಣ ದೋಚುತ್ತಿದ್ದ ಕಳ್ಳನನ್ನು ಹಿಡಿದು ಧರ್ಮದೇಟು ನೀಡಿದ ಸ್ಥಳೀಯರು
ಚಿಕ್ಕಮಗಳೂರು : ಅಣ್ಣಪ್ಪ ಸ್ವಾಮಿ ದೇವಾಲಯದಿಂದ ಹಣ ಕದಿಯುವ ವೇಳೆ ಸ್ಥಳೀಯರ ಕೈಗೆ ಕಳ್ಳನೋರ್ವ ಸಿಕ್ಕಿಬಿದ್ದು ಧರ್ಮದೇಟು ತಿಂದ ಘಟನೆ ನಡೆದಿದೆ.
ಚಿಕ್ಕಮಗಳೂರು ಹಾಗೂ ದಕ್ಷಿಣಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿರುವ ಶ್ರೀ ಅಣ್ಣಪ್ಪ ಸ್ವಾಮಿ ದೇಗುಲದಲ್ಲಿದ್ದ ಕಾಣಿಕೆ ಹುಂಡಿಯಿಂದ ಹಣ ಕದಿಯುವಾಗ ಬೇಲೂರು ಮೂಲದ ವ್ಯಕ್ತಿ ಸಿಕ್ಕಿಬಿದ್ದಿದ್ದು ಆತನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
ಈ ದಾರಿಯಲ್ಲಿ ಸಾಗುವ ಅನೇಕರು ವಾಹನ ನಿಲ್ಲಿಸಿ ದೇವರಿಗೆ ಕಾಣಿಕೆ ರೂಪದಲ್ಲಿ ಹಣವನ್ನು ಕಾಣಿಕೆ ಹುಂಡಿಗೆ ಹಾಕಿ ತೆರಳುತ್ತಾರೆ, ಅಪಾರವಾದ ಭಕ್ತಿಯನ್ನು ಅಣ್ಣಪ್ಪ ಸ್ವಾಮಿಯ ಮೇಲೆ ಹೊಂದಿರುವ ಭಕ್ತರು ಕಳ್ಳ ನಡೆಸಿರುವ ಈ ಕೃತ್ಯವನ್ನು ಕಂಡು ಸಿಟ್ಟಾಗಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.
ಆದರೆ ಈ ಕುರಿತು ವೀಡಿಯೋ ಮುಖಾಂತರ ಮಾತನಾಡಿರುವ ಹಲ್ಲೆಗೊಳಗಾದ ವ್ಯಕ್ತಿ ಮೊದಲಿಗೆ ಹುಂಡಿಗೆ ಒಂದಷ್ಟು ಹಣ ಹಾಕಿದ್ದೆ ನಂತರದಲ್ಲಿ ಇನ್ನೊಂದಷ್ಟು ಹಣವನ್ನು ಹಾಕಲೆಂದು ಕೈಯಲ್ಲಿ ಹಿಡಿದುಕೊಂಡಿದ್ದೆ ಆದರೆ ಇದನ್ನು ಸ್ಥಳೀಯರು ತಪ್ಪಾಗಿ ಅರ್ಥೈಸಿಕೊಂಡು ಹೊಡೆದಿದ್ದಾರೆ ಎಂದಿದ್ದಾನೆ ಹಾಗೂ ಯುವಕರ ಬಳಿ ಹೋಗಲಿ ಬಿಡಿ ನನ್ನದೇ ತಪ್ಪು ಎಂದು ಒಪ್ಪಿಕೊಂಡಿದ್ದಾನೆ. ನಾಲ್ಕು ಬಾರಿಸಿದ ಯುವಕರು ಮುಂದಿನ ದಿನಗಳಲ್ಲಿ ಈ ರೀತಿಯ ಕಳ್ಳತನ ನಡೆಸದೇ ಉತ್ತಮವಾಗಿ ಬಾಳುವಂತೆ ಆತನಿಗೆ ತಿಳಿಸಿದ್ದಾರೆ.

.jpeg)

.jpeg)
.jpeg)
.jpeg)
.jpeg)
.jpeg)
.jpeg)
.jpeg)

0 Comments