ಕೇರಳಕ್ಕೆ ಭಾನುವಾರ ಮುಂಗಾರು ಪ್ರವೇಶವಾದ ಹಿನ್ನೆಲೆ 03 ರಿಂದ 04 ದಿನಗಳೊಳಗೆ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಙಾನಿ ಎ, ಪ್ರಸಾದ್ ಮಾಹಿತಿ ನೀಡಿದ್ದಾರೆ. ಭಾನುವಾರ ಕೇರಳದ 14 ಕೇಂದ್ರಗಳಲ್ಲಿ ಮುಂಗಾರು ಪ್ರವೇಶವಾಗಿದ್ದು ಇದನ್ನಾಧರಿಸಿ ಕರ್ನಾಟಕಕ್ಕೆ ಜೂನ್ 02 ಅಥವಾ 03 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆಯ ನಿರೀಕ್ಷೆಯಿರುವ ಕಾರಣ ಮಲೆನಾಡು ಭಾಗದ ರೈತರು ಕೃಷಿ ಚಟುವಟಿಕೆಗಳ ತಯಾರಿಯನ್ನು ಬಹುತೇಕ ಭಾಗಗಳಲ್ಲಿ ಆರಂಭಿಸಿದ್ದು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ.




0 Comments