ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಸಿಗಂದೂರು ದೇವಸ್ಥಾನದ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಹತ್ತು ಜನರು ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ.
ಬೆಂಗಳೂರಿನ ರಾಮನಗರದ ಬಿಡದಿಯ ಪ್ರವಾಸಿಗರನ್ನು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಕಡೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಚಾಲಕನಿಗೆ ಮೂರ್ಛೆರೋಗ ಬಂದ ಕಾರಣ ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಅಪಘಾತದಲ್ಲಿ ಟೆಂಪೋ ಟ್ರಾವೆಲರ್ ವಾಹನದೊಳಗೆ ಇದ್ದ 10 ಮಂದಿ ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಪಘಾತ ಉಂಟಾದ ಸಂದರ್ಭದಲ್ಲಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಅಪಘಾತಕ್ಕೀಡಾದ ವ್ಯಕ್ತಿಗಳನ್ನು ಮೇಲಕ್ಕೆತ್ತುವಲ್ಲಿ ಸಹಕರಿಸಿದ್ದಾರೆ.
ಈ ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.




0 Comments