ಬೆಂಗಳೂರು : ಆಸಾನಿ ಚಂಡಮಾರುತದ ಹಿನ್ನೆಲೆ ರಾಜ್ಯದ ಹಲವೆಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದನ್ನೂ ಓದಿ : ಶೃಂಗೇರಿ : ಕಾವಡಿ ಸಮೀಪ ಬೈಕ್ ಅವಘಡ ; ಚಾಲಕನ ಸ್ಥಿತಿ ಗಂಭೀರ
ಕರ್ನಾಟಕ ರಾಜ್ಯದಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉಡುಪಿ ಹಾಗೂ ಉತ್ತರಕನ್ನಡದ ಭಾಗಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದ ಅನೇಕ ಕಡೆಗಳಲ್ಲಿ ಈಗಾಗಲೇ ಮಳೆಯು ಆರಂಭವಾಗಿದ್ದು ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಇಂದು ಸಂಜೆಯಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಜನರು ಸುರಕ್ಷಿತವಾಗಿರುವಂತೆ ತಿಳಿಸಿದೆ.
ಆಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ತೀವ್ರತೆಯನ್ನು ಪಡೆದುಕೊಂಡು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ನಡೆಸಬೇಕೆಂದು ತಿಳಿಸಲಾಗಿದೆ.
ಮಲೆನಾಡು ಭಾಗದಲ್ಲಿ ಕೃಷಿ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುವ ಜನರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾರ್ಯ ನಿರ್ವಹಿಸಬೇಕೆಂದು ತಿಳಿಸಲಾಗಿದೆ.




0 Comments