ಹಾಸನ : (ನ್ಯೂಸ್ ಮಲ್ನಾಡ್ ವರದಿ) ಹಾಸನದಲ್ಲಿ ಆಟೋ ರಿಕ್ಷಾ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. 

ಹಾಸನದ ಹೊಸ ಬಸ್ ನಿಲ್ದಾಣದ ಸಮೀಪ ಈ ದುರ್ಘಟನೆ ಸಂಭವಿಸಿದ್ದು ಮೃತ ಆಟೋ ಚಾಲಕನನ್ನು ಆಟೋಗಿರಿ ಎಂದು ಗುರುತಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚಾಲಕ ನಂತರದಲ್ಲಿ ಆಟೋ ಓಡಿಸಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ. 

ಇದನ್ನೂ ಓದಿ : ಮಹಿಳೆಯನ್ನು ಬೆತ್ತಲೆಗೊಳಿಸಿ ಅತ್ಯಾಚಾರದ ಆರೋಪ ; ನಾಲ್ವರ ಮೇಲೆ ಪ್ರಕರಣ ದಾಖಲು

ಆಟೋ ಚಾಲಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಶವ ಅತೋದಲ್ಲೀಯೆ ದೊರೆತಿದೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಎಂಬ ಮಾಹಿತಿ ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಘಟನೆಯ ಕುರಿತಂತೆ ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಶ್ವಾನದಳ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. 

ಕುಟುಂಬಕ್ಕೆ ಅಸರೆಯಾಗಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬ ನೋವಿನಲ್ಲಿದ್ದು ಗೆಳೆಯರು ಹಾಗೂ ಕುಟುಂಬಸ್ಥರು ಯುವಕನ ಸಾವಿನ ಕುರಿತಾಗಿ ಬೇಸರವನ್ನು ವ್ಯಕ್ತಪಡಿಸಿದ್ದಾರೆ.