ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಮೆಗ್ಗಾನ್ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ವೈದ್ಯರು ದೊರೆಯದೆ ರೋಗಿಯ ಕಡೆಯವರು ಆಸ್ಪತ್ರೆಯಲ್ಲಿಯೇ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ.
ಇದನ್ನೂ ಓದಿ : ತೀರ್ಥಹಳ್ಳಿ : ಮಹಿಳೆಯನ್ನು ಬೆತ್ತಲೆಗೊಳಿಸಿ ಅತ್ಯಾಚಾರದ ಆರೋಪ ; ನಾಲ್ವರ ಮೇಲೆ ಪ್ರಕರಣ ದಾಖಲು
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ನಿನ್ನೆ ತಡರಾತ್ರಿ ತೀರ್ಥಹಳ್ಳಿ ತಾಲೂಕಿನ ಕೆಳಕೆರೆ ಗ್ರಾಮದ ಪ್ರವೀಣ್ ಅವರ ತಂದೆಯಮೇಲೆ ಹಲ್ಲೆಯಾಗಿತ್ತು, ಹಲ್ಲೆಗೀಡಾದ ವ್ಯಕ್ತಿಯ ತಲೆಯ ಭಾಗಕ್ಕೆ ಗಂಭೀರಗಾಯಗಳಾಗಿ ತೀವ್ರ ರಕ್ತಸ್ರಾವ ಉಂಟಾಗಿತ್ತು. ಅಗತ್ಯ ಚಿಕಿತ್ಸೆಯು ದೊರೆಯಬೇಕಿದ್ದ ಕಾರಣ ತೀರ್ಥಹಳ್ಳಿಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರೋಗಿಯನ್ನು ಕರೆ ತರಲಾಗಿತ್ತು, ಆದರೆ ಆ ಸಮಯದಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕಿದ್ದ ವೈದ್ಯರಿಲ್ಲದೆ ಎರಡು ಗಂಟೆಗಳ ಸಮಯ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಬಳಿಕದಲ್ಲೂ ಕೂಡ ಮೆಡಿಕಲ್ ವಿದ್ಯಾಭ್ಯಾಸ ನಡೆಸುತ್ತಿದ್ದ ವ್ಯಕ್ತಿಗಳಿಂದ ರೋಗಿಗೆ ಚಿಕಿತ್ಸೆಕೊಡಿಸಿ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತಾಗಿ ಪ್ರತಿಭಟಿಸಿದ ರೋಗಿಯ ಕಡೆಯವರು ಬಡವರಿಗೆ ಸಮರ್ಪಕವಾದ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗುತ್ತಿಲ್ಲ, ಈ ಆಸ್ಪತ್ರೆಯಲ್ಲಿ ಇದೇನು ಮೊದಲಲ್ಲ, ರಾತ್ರಿ ವೇಳೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕಿರುವ ವೈದ್ಯರು ಸರಿಯಾದ ಸಮಯದಲ್ಲಿ ಲಭ್ಯವಾಗುವುದಿಲ್ಲ ಈ ಕುರಿತು ಆಸ್ಪತ್ರೆ ಆಡಳಿತ ಮಂಡಳಿಯವರು ಸೂಕ್ತ ಕ್ರಮಗಳನ್ನು ಕೈಗೊಂಡು ಅಗತ್ಯ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.




0 Comments