ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಪರವಾನಗಿ ಹೊಂದದೇ ಬಂದೂಕುಗಳನ್ನು ರಿಪೇರಿ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆತನ ಬಳಿಯಿದ್ದ ಬಂದೂಕುಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ನಿವಾಸಿ ಪಾಲಾಕ್ಷಪ್ಪ ಬಂಧಿತ ಆರೋಪಿ. ಪಾಲಾಕ್ಷಪ್ಪ ಪರವಾನಗಿ ಹೊಂದದೇ ಮನೆಯಲ್ಲಿಯೇ ಬಂದೂಕುಗಳ ರಿಪೇರಿ ನಡೆಸುತ್ತಿದ್ದ ಎಂಬ ಖಚಿತ ಮಾಹಿತಿಯನ್ನು ಪಡೆದ ಪೊಲೀಸರು ದಾಳಿಯ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. 

ಇದನ್ನೂ ಓದಿ : ಶೃಂಗೇರಿ : ಮಳೆಯ ಹೊಡೆತಕ್ಕೆ ನೆಲಕ್ಕುರುಳಿದ ಬೆಳ್ಳನ ಬದುಕು

ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಅಕ್ರಮವಾಗಿ ಆರೋಪಿ ರಿಪೇರಿ ನಡೆಸುತ್ತಿದ್ದ 09 ನಾಡ ಬಂದೂಕುಗಳು ಪೊಲೀಸರಿಗೆ ದೊರೆತಿದೆ. ಬಂದೂಕುಗಳನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ಸಹ ಬಂಧಿಸಿದ್ದಾರೆ.

ಬಂಧಿತನ ಮೇಲೆ ಆಯುಧ ಕಾಯ್ದೆಯಡಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ದೊರೆತಿದೆ.

ಚಿಕ್ಕಮಗಳೂರು : ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆದ ಗಾಂಜಾ ಪ್ರಕರಣದ ಆರೋಪಿ 

ಚಿಕ್ಕಮಗಳೂರು : ಗಾಂಜಾ ಪ್ರಕರಣದಲ್ಲಿ ಬಂಧಿಸಲ್ಪಟ್ಟು ವಿಚಾರಣೆಗೊಳಗಾಗಿದ್ದ ಖೈದಿಯೋರ್ವ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.

ಗಾಂಜಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲ್ಪಟ್ಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಧನರಾಜ್ ಅನಾರೋಗ್ಯದ ನಿಮಿತ್ತ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ. 

ಈ ಮಧ್ಯೆ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಪೊಲೀಸರ ಕಣ್ತಪ್ಪಿಸಿ ಚಿಕಿತ್ಸೆಗೆ ದಾಖಲಾಗಿದ್ದ ಕೊಠಡಿಯಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ನಿಯೋಜಿಸಿದ್ದ ಇಬ್ಬರನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು ಆರೋಪಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.