ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಹುಲಿ ಉಗುರುಗಳನ್ನು  ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

 ಇದನ್ನೂ ಓದಿ :  ಶೃಂಗೇರಿ : ಕಾವಡಿ ಸಮೀಪ ಬೈಕ್ ಅವಘಡ ; ಚಾಲಕನ ಸ್ಥಿತಿ ಗಂಭೀರ

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸಿದ್ಧಾಪುರ ಕಡೆಗೆ ಹೋಗುವ ರಸ್ತೆ ಬದಿಯ ಬಸ್ ನಿಲ್ದಾಣದ ಬಳಿ ಹುಲಿ ಉಗುರನ್ನು ಮಾರಾಟ ನಡೆಸಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಇಪ್ಪತ್ತೆರಡು ಹುಲಿ ಉಗುರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತರನ್ನು ಜಡೆಸ್ವಾಮಿ ಹಾಗೂ ರಾಮಚಂದ್ರ ಎಂದು ಗುರುತಿಸಲಾಗಿದೆ. 

ಈ ಕಾರ್ಯಾಚರಣೆಯನ್ನು ಖಚಿತ ಮಾಹಿತಿಯ ಮೇರೆಗೆ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು.ಸವಿ, ಸಿಬ್ಬಂದಿ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಈ ಸಂಬಂಧ ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದು ಆರೋಪಿಗಳ ಕೃತ್ಯದ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.