ಇದನ್ನೂ ಓದಿ : ಭೀಕರ ರಸ್ತೆ ಅಪಘಾತ ; ಶೃಂಗೇರಿ ಯುವಕನ ದುರ್ಮರಣ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆಯ ರಸ್ಥೆಯಾದ ಗಾಂಧಿಘರ್ ಸಮೀಪದಲ್ಲಿ ಬೃಹದಾಕಾರದ ಮರವೊಂದು ರಸ್ತೆಗೆ ಉರುಳಿರುವ ಪರಿಣಾಮ ವಾಹನ ಸಂಚಾರಕ್ಕೆ ಕಳೆದ ಒಂದು ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಸ್ಥಗಿತಗೊಂಡಿದೆ.
ಈ ಭಾಗದಲ್ಲಿ ಕಳೆದ ಒಂದು ಗಂಟೆಗಿಂತಲೂ ಅಧಿಕ ಸಮಯ ನಿರಂತರವಾಗಿ ಸುರಿದ ಮಳೆಯ ಪರಿಣಾಮ ಈ ಘಟನೆ ಸಂಭವಿಸಿದ್ದು , ಕಿಲೋಮೀಟರ್ ಗಟ್ಟಲೇ ಉದ್ದಲಾಗಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಸ್ಥಳಕ್ಕೆ ಧಾವಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮರವನ್ನು ತೆರವು ಮಾಡುವಲ್ಲಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯು ಅಲ್ಲಲ್ಲಿ ಕೆಲ ಸಮಸ್ಯೆಗಳನ್ನು ಉಂಟುಮಾಡುತ್ತಿದೆ.
ತನು ಕೊಟ್ಟಿಗೆಹಾರ, ವರದಿಗಾರರು




0 Comments