ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಕೃಷಿಕನೋರ್ವ ತನ್ನ ಗದ್ದೆಗೆ ತೆರಳಿದ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. 

ತೀರ್ಥಹಳ್ಳಿ ತಾಲೂಕಿನ ಮೇಲಿನ ತುದೂರು ಗ್ರಾಮದ ಶಂಕರ್ ಬಿನ್ ಲಿಂಗಾನಾಯ್ಕ್ 53 ವರ್ಷ ಪ್ರಾಯದ ವ್ಯಕ್ತಿ ಮೃತ ದುರ್ದೈವಿ. ರಾತ್ರಿಯ ಸಮಯದಲ್ಲಿ ಗದ್ದೆಗೆ ಹೋಗಿ ಬರುತ್ತೇನೆಂದು ತೆರಳಿ ಸಮಯ ಕಳೆದರೂ ಮನೆಗೆ ಹಿಂದಿರುಗದೇ ಇದ್ದಾಗ ಮನೆಯವರು ಆತಂಕಗೊಂಡು ಬೆಳಗ್ಗಿನ ಸಮಯದಲ್ಲಿ ಹುಡುಕಿದ್ದಾರೆ.

ಇದನ್ನೂ ಓದಿ : ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ವ್ಯಕ್ತಿ ಸೆರೆ

ಈ ಸಂದರ್ಭದಲ್ಲಿ ಶಂಕರ್ ಅವರು ಗದ್ದೆಯ ಹೊಂಡಕ್ಕೆ ಕಾಲುಜಾರಿ ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಭಾಗದಲ್ಲಿ ಉತ್ತಮ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಸಂಪೂರ್ಣವಾಗಿ ತುಂಬಿ ಹರಿಯುತ್ತಿದೆ. ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡು ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದರೆ ಇನ್ನೂ ಕೆಲ ಭಾಗಗಳನ್ನು ಸಂಪರ್ಕಿಸುವ ರಸ್ತೆಗಳಿಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ.

ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರು ಹಾಗೂ ಪರಿಚಯಸ್ಥರು ಅತೀವವಾದ ನೋವನ್ನು ವ್ಯಕ್ತಪಡಿಸಿದ್ದಾರೆ.