ಹಾಸನ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ ಜೂಜುಕೋರರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.
ಹಾಸನ ಹೊರವಯದ ಸತ್ಯಮಂಗಲ ಕೆರೆ ಏರಿ ವ್ಯಾಪ್ತಿಯಲ್ಲಿ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮವಾಗಿ ಜೂಜಾಟ ನಡೆಸುತ್ತಿರುವ ಮಾಹಿತಿಯನ್ನು ಪಡೆದ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಸೈ ಹಾಗೂ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಸೆರೆ ಹಿಡಿದಿದ್ದಾರೆ.
ಬಂಧಿತರ ಬಳಿಯಿದ್ದ ಐದು ಸಾವಿರಕ್ಕೂ ಅಧಿಕ ನಗದನ್ನು ವಶಪಡಿಸಿಕೊಂಡ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಅವರು ಯಾರೂ ಕೂಡ ಈ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ತಿಳಿಸಿದ್ದಾರೆ.
ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿಯ ಕಾರು ತಡೆದು ಕೊಲೆ ಬೆದರಿಕೆ ಹಾಕಿದ ದುಷ್ಕರ್ಮಿ ; ಹಲ್ಲೆಗೆ ಯತ್ನ
ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಮಗಳಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆಯೊಡ್ಡಿ, ಹಲ್ಲೆಗೈಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಮಗಳಾದ ರಾಜನಂದಿನಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿ ಮಂಜುನಾಥ್ ಹಲ್ಲೆಗೈಯ್ಯಲು ಯತ್ನಿಸಿದ್ದಾನೆ, ಹಾಗೂ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದಲ್ಲದೇ ಕಾರು ಚಾಲಕನ ಮೇಲೂ ಹಲ್ಲೆಗೆ ಯತ್ನಿಸಿದ್ದು ಈ ಸಂಬಂಧ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜನಂದಿನಿಯವರು ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ.
ಯಾವ ಕಾರಣಕ್ಕಾಗಿ ರಾಜ ನಂದಿನಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಹಾಗೂ ಕೊಲೆ ಬೆದರಿಕೆ ಹಾಕಿದ್ದಾನೆ ಎಂಬ ಮಾಹಿತಿ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.





0 Comments