ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಮದುವೆಯಾಗಿ ಎರಡು ವರ್ಷ ಕಳೆದ ಮಹಿಳೆಯೋರ್ವರು ಪ್ರಥಮಬಾರಿಗೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಅಲ್ಮಾಜ್ ಬಾನು ಅವರು ಇಂದು ಚೊಚ್ಚಲ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಹೆರಿಗೆಯು ಇಂದು ಬೆಳಗ್ಗೆ ಏಳು ಮೂವತ್ತರ ಸಮಯದಲ್ಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆದಿದೆ.
ಇದನ್ನೂ ಓದಿ : ಕಾಫಿನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು ; ಬೈಕ್ ಚಾಲನೆ ಮಾಡುತ್ತಿದ್ದಾತನನ್ನು ಕಡಿದು ಎಸ್ಕೇಪ್ ಆದ ದುಷ್ಕರ್ಮಿಗಳು
ಎರಡು ಗಂಡು ಹಾಗೂ ಎರಡು ಹೆಣ್ಣುಮಕ್ಕಳಿಗೆ ಅಲ್ಮಾಜ್ ಜನ್ಮ ನೀಡಿದ್ದಾರೆ. ನಾಲ್ಕು ಮಕ್ಕಳು ಕೂಡ ಯಾವುದೇ ತೊಂದರೆಗೀಡಾಗದೆ ಆರೋಗ್ಯವಂತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ರೀತಿಯಾಗಿ ಹೆರಿಗೆ ಮಾಡಿಸುವುದು ವೈದ್ಯರಿಗೂ ಕೂಡ ಸವಾಲಾಗಿದ್ದು ತಾಯಿ ಹಾಗೂ ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳುಂಟಾಗದಂತೆ ಹೆರಿಗೆ ಮಾಡಿಸುವಲ್ಲಿ ಸರ್ಜಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಮಹತ್ತರ ಪಾತ್ರವನ್ನು ವಹಿಸಿ ಯಶಸ್ವಿಯಾಗಿ ಹೆರಿಗೆಯನ್ನು ಮಾಡಿದ್ದಾರೆ.
ಚೊಚ್ಚಲ ಹೆರಿಗೆಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ ಯಾವುದೇ ಸಮಸ್ಯೆಗಳು ಬಾರದಂತೆ ನಿರ್ವಹಿಸಿದ ಪ್ರಸೂತಿ ತಜ್ಞರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.



0 Comments