ಹಾಸನ : (ನ್ಯೂಸ್ ಮಲ್ನಾಡ್ ವರದಿ) ಮನೆಯ ಹೊರಭಾಗದಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ. 

ಇದನ್ನೂ ಓದಿ : ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಚಾಲಕನಿಗೆ ಗಂಭೀರ ಗಾಯ

ಹಾಸನದ ಕೆ.ಆರ್ ಪುರಂ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ಕೆ.ಆರ್ ಪುರಂ ನ ರಾಮಚಂದ್ರೇಗೌಡ ಎಂಬುವವರು ಎಂದಿನಂತೆಯೇ ಮನೆಯ ಮುಂದೆ ತಮ್ಮ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದು ಮಾರನೆಯ ದಿನ ನೋಡುವಾಗ ಕಾರು ನಾಪತ್ತೆಯಾಗಿದೆ. ಅವರು ಎಲ್ಲೆಡೆ ಹುಡುಕಿ ಎಲ್ಲೂ ಕಾರು ಪತ್ತೆಯಾಗದೇ ಇದ್ದಾಗ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು : https://forms.gle/PvypXpJerzDzsrfE9

ಮೂರು ಲಕ್ಷ ರೂಪಾಯಿ ಬೆಲೆ ಬಾಳುವ ಸ್ಕಾರ್ಪಿಯೋ ಕಾರನ್ನು ಕದ್ದಿರುವ ಕಳ್ಳರನ್ನು ಪತ್ತೆ ಹಚ್ಚಬೇಕೆಂದು ಹಾಗೂ ಕಾರನ್ನು ಕದ್ದಿರುವ ಕಳ್ಳರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ರಾಮಚಂದ್ರೇಗೌಡ ಅವರು ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಾಸನದ ಬಡಾವಣೆ ಪೊಲೀಸ್ ಠಾಣೆಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದು  ಆರೋಪಿಗಳನ್ನು ಸೆರೆ ಹಿಡಿಯುವ ಸಲುವಾಗಿ ಬಲೆ ಬೀಸಿದ್ದಾರೆ.

ಮನೆ ಕಳ್ಳತನ ನಡೆಸಿ ಚಿನ್ನಾಭರಣ ದೋಚಿದ್ದ ಖದೀಮನವನ್ನು ಸೆರೆ ಹಿಡಿದ ಪೊಲೀಸರು

ಚಿಕ್ಕಮಗಳೂರು : ಮನೆಗಳ ಕಳ್ಳತನ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ನಡೆಸಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. 

2021 ರಲ್ಲಿ ಕಡೂರು ಹಾಗೂ ಬೀರೂರು ಭಾಗದ ಮನೆಗಳಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಚಿನ್ನಾಭರಣಗಳ ಸಮೇತ ಬೀರೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಕಡೂರು ಹಾಗೂ ಬೀರೂರಿನ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ಮನೆಗಳ ಕಳ್ಳತನ ನಡೆಸಿದ್ದ ಹಾಗೂ ಬೆಲೆಬಾಳುವ ಆಭರಣಗಳನ್ನು ಮನೆಯಿಂದ ಹೊತ್ತೊಯ್ದಿದ್ದ ಈತನಿಗಾಗಿ ಬಲೆ ಬೀಸಿದ್ದ ಪೊಲೀಸರು ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಕಳ್ಳತನ ಮಾಡಿದ್ದ 7.5 ಲಕ್ಷ ರೂಪಾಯಿ ಬೆಲೆಬಾಳುವ 164 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಈ ಸಂಬಂಧ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಬೀರೂರು ಸಿಪಿಐ ಅವರ ನೇತೃತ್ವದ ಪೊಲೀಸರ ತಂಡ ಬೇಧಿಸುವಲ್ಲಿ ಯಶಸ್ವಿಯಾಗಿದೆ.