ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ನ ಮೇಲೆ ವಿದ್ಯುತ್ ತಂತಿ ಬಿದ್ದು ವಿದ್ಯುತ್ ಇಲ್ಲದ ಪರಿಣಾಮ ಸಂಭವಿಸುತ್ತಿದ್ದ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ಸಂಭವಿಸಿದೆ.

ಇದನ್ನೂ ಓದಿ : ತೀರ್ಥಹಳ್ಳಿ : ಗದ್ದೆ ಹೊಂಡಕ್ಕೆ ಬಿದ್ದು ದುರ್ಮರಣವನ್ನಪ್ಪಿದ ರೈತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಸಮೀಪದಲ್ಲಿ ಈ ಘಟನೆ ನಡೆದಿದ್ದು ಮೂಡಿಗೆರೆಯಿಂದ ಚಿಕ್ಕಮಗಳೂರು ಕಡೆಗೆ ಕೆ.ಎಸ್.ಆರ್.ಟಿ.ಸಿ ಬಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ವಿದ್ಯುತ್ ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ಅವಘಡ ತಪ್ಪಿದೆ. 

ಕೆ.ಎಸ.ಆರ್.ಟಿ.ಸಿ ಬಸ್ಸಿನಲ್ಲಿ ಅಂದಾಜು ೫೦ ಜನ ಪ್ರಯಾಣಿಕರು ಪ್ರಯಾಣ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪ್ರಯಾಣ ನಡೆಸುತ್ತಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳದಿಂದ ಬಸ್ ತೆರಳಿದ ನಂತರ ತಂತಿ ಉರುಳಿದ್ದ ವಿದ್ಯುತ್ ಕಂಬ ಸಹ ಬಿದ್ದಿದೆ ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆ ಮಲೆನಾಡು ಭಾಗದಲ್ಲಿ ಅನೇಕ ಸಮಸ್ಯೆಗಳನ್ನು ಸೃಷ್ಟಿಮಾಡಿದೆ. ಸಂಭವಿಸಿದ ಮಳೆಗೆ ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ವಾಹನಗಳ ಸಂಚಾರಕ್ಕೆ ಕೆಲ ಕಾಲ ಅಡ್ಡಿ ಉಂಟುಮಾಡಿತ್ತು.

ಕಾಡಾನೆಗಳ ದಾಳಿಗೆ ಬೈಕ್ ಜಖಂ ; ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆನಾಶ

ಹಾಸನ : ಹಾಸನದಲ್ಲಿ ಕಾಡಾನೆಗಳ ದಾಂಧಲೆ ಮುಂದುವರೆದಿದ್ದು ಆನೆಯು ಬೆಳೆನಾಶ ಹಾಗೂ ಬೈಕ್ ನ್ನು ಜಖಂಗೊಳಿಸಿರುವ ಘಟನೆ ನಡೆದಿದೆ.

ಹಾಸನದ ಹೊರವಲಯವಾದ ಅರಕಲಗೂಡು ತಾಲೂಕಿನ ಮರಿಯಾನಗರದಲ್ಲಿ ಆನೆಗಳು ದಾಂಧಲೆಯನ್ನು ನಡೆಸಿದೆ. ಮನೆಯ ಬಳಿಯೇ ಏಳು ಕಾಡಾನೆಗಳು ಗುಂಪಿನಲ್ಲಿ ಅತ್ತಿಂದಿತ್ತ ಓಡಾಡುತ್ತಾ ಮನೆಯ ಹೊರಗಿದ್ದ ಬೈಕ್ ನ್ನು ಜಖಂಗೊಳಿಸಿದೆ. ಆನೆಯ ಹಾವಳಿಗೆ ನಿಯಂತ್ರಣವೇ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ. 

ಇದಲ್ಲದೇ ಹಾಸನದ ಸರೋಜಮ್ಮ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಶುಂಠಿ ಮತ್ತು ಕ್ಯಾನೆ ಬೆಳೆಯನ್ನು ಆನೆಯು ತುಳಿದು ಹಾಳು ಮಾಡಿದೆ. ಈ ಸಂಬAಧ ಆನೆಯ ಉಪಟಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಡಿವಾಣ ಹಾಕಬೇಕು ಹಾಗೂ ಸೂಕ್ತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಹಾಗೂ ಬೆಳೆಹಾನಿಗೀಡಾದವರು ಆಗ್ರಹಿಸಿದ್ದಾರೆ. 

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪರಿಹಾರದ ಕುರಿತಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಭರವಸೆ ನೀಡಿದ್ದಾರೆ