ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಕಾರ್ಯಾಚರಣೆಯ ಮೂಲಕ ದಾಳಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣೆಯ ನೂತನ ಸಬ್ ಇನ್ಸ್ಪೆಕ್ಟರ್ ಸಿ.ಸಿ.ಪವನ್ ಕುಮಾರ್ ಮತ್ತು ಠಾಣೆಯ ಪೋಲಿಸರು ದಾಳಿ ನಡೆಸಿದ್ದು ಸಾವಿರಾರು ರೂಪಾಯಿ ಬೆಲೆ ಬಾಳುವ ಅಕ್ರಮ ಮದ್ಯವನ್ನು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಶ್ರೀನಿವಾಸ್ ಎಂಬ ಆರೋಪಿಯನ್ನು  ಬಂಧಿಸಿರುವ ಬಾಳೂರು ಪೊಲೀಸರು ಆತನಿಂದ 27,000 ರೂಪಾಯಿಯ ಮೌಲ್ಯದ 768 ಟೆಟ್ರಾ ಪ್ಯಾಕ್, 69.12 ಲೀಟರ್, ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಈತನು ಹ್ಯಾಂಡ್ ಪೋಸ್ಟ್ ಬಳಿ ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರುತ್ತಿದ್ದ ಎನ್ನಲಾಗಿದೆ. 

ಘಟನೆಯ ಸಂಬಂಧ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕಾರ್ಯಾಚರಣೆಯಲ್ಲಿ ಬಾಳೂರು ಠಾಣಾ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್, ಪೊಲೀಸರಾದ ಅನಿಲ್ ಕುಮಾರ್,  ಪ್ರವೀಣ್, ವಸಂತ್, ಮತ್ತು ಅನಿಲ್ ಇದ್ದರು.

ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿಯೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು ಈ ಕುರಿತು ಅಬಕಾರಿ ಇಲಾಖೆ ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತನು ಕೊಟ್ಟಿಗೆಹಾರ, ವರದಿಗಾರರು