ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಹಸುಗಳಿದ್ದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಹಸುಗಳು ಸಜೀವವಾಗಿ ದಹನಗೊಂಡಿರುವ ದುರ್ಘಟನೆ ಕೊಪ್ಪದಲ್ಲಿ ನಡೆದಿದೆ.
ಇದನ್ನು ಓದಿ : ಭದ್ರಾ ಹಿನ್ನೀರಿಗೆ ಬಿದ್ದು ಯುವಕ ಸಾವು
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಪುರ ಗ್ರಾಮದ ನಾಗೇಶ್ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು ಎರಡು ಹಸುಗಳು ದಾರುಣವಾಗಿ ಸಾವನ್ನಪ್ಪಿದೆ.
ನಾಗೇಶ್ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ಸಂಭವಿಸಿದ್ದು ಬೆಂಕಿಯು ವ್ಯಾಪಿಸಿದಾಗ ಅಕ್ಕಪಕ್ಕದ ಮನೆಯವರು ನೋಡಲೆಂದು ತೆರಳಿದ್ದಾರೆ. ಈ ಸಂದರ್ಭದಲ್ಲಿ ಅಗ್ನಿ ಅವಘಡ ಉಂಟಾಗಿರುವುದು ತಿಳಿದಿದೆ. ಕೂಡಲೇ ಅವರು ಅಗ್ನಿಶಾಮಕದಳದ ಅಧಿಕಾರಿಗಳಿಗೆ ಕರೆ ಮಾಡಿ ಈ ಕುರಿತು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ಅಗ್ನಿಯನ್ನು ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸ್ ಠಾಣೆಯ ಪಿಎಸೈ ಶ್ರೀನಾಥ್ ರೆಡ್ಡಿ, ಗ್ರಾಮ ಪಂಚಾಯತ್ ಸದಸ್ಯ ಅಭಿಷೇಕ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.




0 Comments