ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 08 ಜನರನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ತ್ರೈಮಾಸಿಕ ನಿರ್ವಹಣೆ ಹಾಗೂ ಲೈನ್ ಸರಿಪಡಿಸುವ ಸಲುವಾಗಿ ನಾಳೆ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ ಏಳು ಜನರನ್ನು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಅವರ ಬಳಿಯಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಅಜ್ಜಂಪುರ ನಗರದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಓರ್ವನನ್ನು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. 

ಬಂಧಿತ ಆರೋಪಿಗಳಿಂದ ಒಟ್ಟು 9825 ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಅಧಿಕಾರಿಗಳು ಅಕ್ರಮವಾಗಿ ಈ ರೀತಿಯ ಚಟುವಟಿಕೆಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡು ಬಂದಲ್ಲಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. 

ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣೆಯ ಪೊಲೀಸರು ಭಾಗಿಯಾಗಿ ದಾಳಿ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.