ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೋಮಾಂಸವನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದ ಅಂಗಡಿಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಸೆರೆ ಹಿ ಯಶಸ್ವಿಯಾಗಿದ್ದಾರೆ.
ರೈಲ್ವೇ ಇಂಜಿನ್ ಡಿಕ್ಕಿ ಪರಿಣಾಮ: ಭಿಕ್ಷಾಟನೆ ಮೂಲಕ ಸಂಗ್ರಹಿಸಿ ದೇವಸ್ಥಾನಕ್ಕೆ ದಾನ ನೀಡಿದ್ದ ದಾನಿ ಕೆಂಪಜ್ಜಿ ಮೃತ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪದ ಲಿಂಗಾಪುರ ಗ್ರಾಮದಲ್ಲಿ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಗೋಮಾಂಸ ಹಾಗೂ ಜೀವಂತವಾಗಿದ್ದ ಹಸುವನ್ನು ಕಟುಕನಿಂದ ವಶಕ್ಕೆ ಪಡೆದಿದ್ದಾರೆ.
ಗೋವನ್ನು ಕಡಿಯಲು ಸಿದ್ಧತೆ ನಡೆಸುತ್ತಿದ್ದ ವೇಳೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು ಗೋವಿನ ಪ್ರಾಣ ಉಳಿದಿದೆ. ಬಂಧಿತ ಆರೋಪಿಯನ್ನು ಇಜಾಜ್ ಪಾಷಾ ಎಂದು ಗುರುತಿಸಲಾಗಿದೆ.
ಈ ಕಾರ್ಯಾಚರಣೆಯು ತೀರ್ಥಹಳ್ಳಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮಠಪತಿ ನೇತೃತ್ವದಲ್ಲಿ ನಡೆದಿದೆ. ಈ ದಾಳಿಯಲ್ಲಿ ಪಿಎಸ್ಐ ನವೀನ್, ಸಿಬ್ಬಂದಿಗಳಾದ ಅಭಿಲಾಷ್, ಸಂದೀಪ್ ಹಾಗೂ ಪುನೀತ್ ಇದ್ದರು.
ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮೇಲೆ ಬಿದ್ದ ವಿದ್ಯುತ್ ತಂತಿ : ತಪ್ಪಿದ ಭಾರೀ ದುರಂತ
ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ನ ಮೇಲೆ ವಿದ್ಯುತ್ ತಂತಿ ಬಿದ್ದು ವಿದ್ಯುತ್ ಇಲ್ಲದ ಪರಿಣಾಮ ಸಂಭವಿಸುತ್ತಿದ್ದ ದೊಡ್ಡ ಅನಾಹುತವೊಂದು ತಪ್ಪಿತುವ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಸಮೀಪದಲ್ಲಿ ಈ ಘಟನೆ ನಡೆದಿದ್ದು ಮೂಡಿಗೆರೆಯಿಂದ ಚಿಕ್ಕಮಗಳೂರು ಕಡೆಗೆ ಕೆ.ಎಸ್.ಆರ್.ಟಿ.ಸಿ ಬಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ವಿದ್ಯುತ್ ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ಅವಘಡ ತಪ್ಪಿದೆ.
ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಅಂದಾಜು ೫೦ ಜನ ಪ್ರಯಾಣಿಕರು ಪ್ರಯಾಣ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪ್ರಯಾಣ ನಡೆಸುತ್ತಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳದಿಂದ ಬಸ್ ತೆರಳಿದ ನಂತರ ತಂತಿ ಉರುಳಿದ್ದ ವಿದ್ಯುತ್ ಕಂಬ ಸಹ ಬಿದ್ದಿದೆ ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆ ಮಲೆನಾಡು ಭಾಗದಲ್ಲಿ ಅನೇಕ ಸಮಸ್ಯೆಗಳನ್ನು ಸೃಷ್ಟಿಮಾಡಿದೆ. ಸಂಭವಿಸಿದ ಮಳೆಗೆ ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ವಾಹನಗಳ ಸಂಚಾರಕ್ಕೆ ಕೆಲ ಕಾಲ ಅಡ್ಡಿ ಉಂಟುಮಾಡಿತ್ತು



0 Comments