ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಕಾವಡಿ ಸಮೀಪದಲ್ಲಿ ಬೈಕ್ ಅವಘಡ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಪ್ರೀತಿಸುವಂತೆ ಕಿರುಕುಳ; ವಿಷ ಸೇವಿಸಿದ್ದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಸಾವು
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪದಲ್ಲಿ ಬೈಕ್ ಅವಘಡ ಸಂಭವಿಸಿದ್ದು ಬೈಕ್ ಸವಾರ ನಂದನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ, ಕಾವಡಿಯ ಅಗ್ರಹಾರ ಸಮೀಪದಲ್ಲಿ ಈ ಘಟನೆ ಸಂಭವಿಸಿದ್ದು ಅಪಘಾತ ನಡೆಯುತ್ತಿದ್ದಂತೆಯೇ ಆತನನ್ನು ಶೃಂಗೇರಿಯ ತಾಲೂಕು ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆದರೆ ಗಂಭೀರವಾಗಿ ಆತ ಗಾಯಗೊಂಡಿರುವ ಕಾರಣ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರಿಂದ ಪ್ರಾಥಮಿಕ ಚಿಕಿತ್ಸೆ ನೀಡಿ, ಆಂಬುಲೆನ್ಸ್ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ನಡೆಸಲಾಗಿದೆ.
ಕಾವಡಿ ಸಮೀಪ ರಸ್ತೆ ಡಾಂಬರೀಕರಣ ನಡೆಯುತ್ತಿದ್ದು, ಬೈಕ್ ನಿಯಂತ್ರಣವನ್ನು ಕಳೆದುಕೊಂಡು ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚಾಲಕನ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದ್ದು, ಶೃಂಗೇರಿ ಕ್ಷೇತ್ರದಲ್ಲಿ ಸುಸಜ್ಜಿತವಾದ ಆಸ್ಪತ್ರೆಯ ಇನ್ನೂ ನಿರ್ಮಾಣವಾಗದ ಕಾರಣ ಇಂತಹ ಗಂಭೀರ ಪರಿಸ್ಥಿತಿಯಲ್ಲಿ, ತುರ್ತು ಚಿಕಿತ್ಸೆ ಅಗತ್ಯವಿರುವ ಸಂದರ್ಭದಲ್ಲಿ ನೂರು ಕಿಲೋಮೀಟರ್ ದೂರದ ಆಸ್ಪತ್ರೆಗೆ ತೆರಳುವುದು ಈ ಭಾಗದ ಜನರಿಗೆ ಕೊನೆಯ ಆಯ್ಕೆಯಾಗಿದೆ.




0 Comments