ಹಾಸನ : (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಯೊಂದು ಬೈಕ್ ಸವಾರನನ್ನು ಬೆನ್ನಟ್ಟಿ ಓಡಿಸಿಕೊಂಡು ಹೋಗಿರುವ ಘಟನೆ ಹಾಸನದಲ್ಲಿ ಸಂಭವಿಸಿದೆ.
ಹಾಸನದ ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿಯ ಕುಳಗಳಲೆ ಗ್ರಾಮದಲ್ಲಿ ಒಂಟಿ ಸಲಗವೊಂದು ಕಾಫಿ ತೋಟದಿಂದ ಹೊರಬಂದು ಹಠಾತ್ತನೆ ಬೈಕ್ ಸವಾರನನ್ನು ಅಟ್ಟಾಡಿಸಿದೆ.
ಈ ಭಾಗದಲ್ಲಿ ಅನೇಕ ಸಮಯಗಳಿಂದ ಆನೆ ದಾಳಿಯು ಹೆಚ್ಚಿದ್ದು ಕಳೆದ ಕೆಲ ತಿಂಗಳುಗಳ ಹಿಂದಷ್ಟೇ ಓರ್ವ ವ್ಯಕ್ತಿಯನ್ನು ಆನೆ ಬಲಿಪಡೆದುಕೊಂಡಿತ್ತು. ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಭಯದಿಂದಲೇ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಜನಪ್ರತಿನಿಧಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಈ ಕುರಿತು ಸೂಕ್ತ ಗಮನಹರಿಸಿ ಮುಂದಾಗಬಹುದಾದ ಅಪಾಯವನ್ನು ನಿಯಂತ್ರಣಕ್ಕೆ ತರುವಲ್ಲಿ ಕಾರ್ಯನಿರ್ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ದಿನಕಳೆದಂತೆ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು ಒಂದೆಡೆಯಿಂದ ಬೆಳೆದ ಬೆಳೆಯನ್ನು ನಾಶ ಮಾಡುತ್ತಿದ್ದರೆ ಇನ್ನೊಂದು ಕಡೆಯಿಂದ ಮನುಷ್ಯರನ್ನು ಬಲಿ ಪಡೆದುಕೊಳ್ಳುತ್ತಿದೆ ಈ ಸಮಸ್ಯೆಗೆ ಸಮಂಜಸವಾದ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.



0 Comments