ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ರೋಡ್ ರೋಲರ್ ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕನ ಮೇಲೆ ಹರಿದ ಪರಿಣಾಮ ಕಾರ್ಮಿಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಇದನ್ನೂ ಓದಿ : ಜಯಪುರ : ಏಕಾಏಕಿ ಹೆಜ್ಜೇನು ದಾಳಿ ; ರೈತನ ದುರ್ಮರಣ


ಶಿವಮೊಗ್ಗದ ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣದ ಕೆಲಸದಲ್ಲಿ ತೊಡಗಿಕೊಂಡಿದ್ದ ಕಾರ್ಮಿಕ ಕಾಮಗಾರಿ ನಡೆಸುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.  

ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಮಲ್ಲಿಕಾರ್ಜುನ್​​ ಹರಿಜನ ಎಂದು ಗುರುತಿಸಲಾಗಿದೆ. ನೆಲ ಸಮತಟ್ಟು ಮಾಡುವ ಸಣ್ಣ ರೋಲರ್ ಕಾರ್ಮಿಕನ ಮೈಮೇಲೆ ಹರಿದು ದುರ್ಘಟನೆ ಸಂಭವಿಸಿದೆ ಹಾಗೂ ರೋಡ್ ರೋಲರ್ ಚಾಲನೆ ಮಾಡುತ್ತಿದ್ದ ಬಿಹಾರ ಮೂಲದ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 

ಘಟನಾ ಸಂಬಂಧ ಮೃತನ ಪೋಷಕರು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.