ಕೊಡಗು : (ನ್ಯೂಸ್ ಮಲ್ನಾಡ್ ವರದಿ) ನವ ವಿವಾಹಿತೆಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಕೊಡಗಿನ ಸಿದ್ಧಾಪುರದಲ್ಲಿ ನಡೆದಿದೆ.
ಇದನ್ನೂ ಓದಿ : ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ; ಅದರಲ್ಲೂ ಲಿಂಗ ಸಮಾನತೆ
ಹೊತ್ತೂರು ಗ್ರಾಮದ ಯುವಕನೊಂದಿಗೆ ಕಳೆದ ಒಂದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ 25 ವರ್ಷ ಪ್ರಾಯದ ಚೈತ್ರಾ ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಮೃತ ದುರ್ದೈವಿ. ಗಂಡನ ಮನೆಯಿಂದ ತಾಯಿಯ ಮನೆಗೆ ಬಂದಿದ್ದ ನವ ವಿವಾಹಿತೆ ಚೈತ್ರಾ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂದು ಈ ವರೆಗೆ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ಈ ಕುರಿತಾದ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.
ಮಗಳನ್ನು ಕಳೆದುಕೊಂಡಿರುವ ಪೋಷಕರು ಹಾಗೂ ಸಂಬಂಧಿಕರು ತೀವ್ರ ಸಂತಾಪವನ್ನು ಸೂಚಿಸಿದ್ದು ಘಟನೆಯ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.




0 Comments