ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಕುಡಿದ ಮತ್ತಿನಲ್ಲಿ ನಾಲ್ವರು ಯುವಕರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಗೃಹ ಸಚಿವರ ತವರು ಕ್ಷೇತ್ರದಲ್ಲಿ ಕೇಳಿ ಬಂದಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಆರಗದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂಬ ಆರೋಪ ಒಂದೆಡೆ ಕೇಳಿ ಬಂದಿದೆ, ಇನ್ನೊಂದೆಡೆ ಗೃಹ ಸಚಿವರ ತವರು ಕ್ಷೇತ್ರದ ಹೆಸರಿಗೆ ಮಸಿ ಬಳಿಯುವ ಸಲುವಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂಬ ಮಾತುಗಳು ಸ್ಥಳೀಯವಾಗಿ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ತೀರ್ಥಹಳ್ಳಿ ತಾಲೂಕಿನ ಆರಗ ವೈನ್ ಶಾಪ್ ಗೆ ಓರ್ವ ಪುರುಷ ಹಾಗೂ ಮಹಿಳೆ ಮದ್ಯ ಖರೀದಿಸಲು ಆಗಮಿಸಿದ್ದಾರೆ ಈ ಸಂದರ್ಭದಲ್ಲಿ ವೈನ್ ಶಾಪ್ ನಲ್ಲಿದ್ದ ಇನ್ನಿಬ್ಬರು ಪುರುಷರು ಮಹಿಳೆಯರನ್ನು ಮದ್ಯದಂಗಡಿಗೆ ಯಾಕಾಗಿ ಕರೆದುಕೊಂಡು ಬಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಜಗಳ ನಡೆದಿದೆ ನಂತರದಲ್ಲಿ ಇಬ್ಬರ ಮೇಲೂ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ ಹಾಗೂ ಹಲ್ಲೆಗೀಡಾದ ಇಬ್ಬರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ದೂರು ದಾಖಲಿಸಿರುವ ದಂಪತಿಗಳು ಕುಡಿತದ ಮತ್ತಿನಲ್ಲಿ ಪತಿಯ ಮೇಲೆ ಬೈಕ್ ಹರಿಸಿ ಆತನ ತಲೆ ಹಾಗೂ ಕಾಲಿನ ಭಾಗಕ್ಕೆ ತೀವ್ರವಾಗಿ ಗಾಯಗೊಳಿಸಲಾಗಿದೆ ಹಾಗೂ ಮಹಿಳೆಯ ಬಟ್ಟೆಯನ್ನು ಹರಿಯಲಾಗಿದೆ ಎಂದು ದಾಖಲಿಸಲಾಗಿದೆ. ಈ ಸಂಬಂಧ ನಾಲ್ವರ ಮೇಲೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸತ್ಯಾ ಸತ್ಯತೆಗಳು ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ತಿಳಿಯಬೇಕಿದೆ.




0 Comments