ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮನೆಗಳ ಕಳ್ಳತನ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ನಡೆಸಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. 


2021 ರಲ್ಲಿ ಕಡೂರು ಹಾಗೂ ಬೀರೂರು ಭಾಗದ ಮನೆಗಳಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಚಿನ್ನಾಭರಣಗಳ ಸಮೇತ ಬೀರೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಕಡೂರು ಹಾಗೂ ಬೀರೂರಿನ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ಮನೆಗಳ ಕಳ್ಳತನ ನಡೆಸಿದ್ದ ಹಾಗೂ ಬೆಲೆಬಾಳುವ ಆಭರಣಗಳನ್ನು ಮನೆಯಿಂದ ಹೊತ್ತೊಯ್ದಿದ್ದ ಈತನಿಗಾಗಿ ಬಲೆ ಬೀಸಿದ್ದ ಪೊಲೀಸರು ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು : https://forms.gle/PvypXpJerzDzsrfE9
ಬಂಧಿತ ಆರೋಪಿಯಿಂದ ಕಳ್ಳತನ ಮಾಡಿದ್ದ 7.5 ಲಕ್ಷ ರೂಪಾಯಿ ಬೆಲೆಬಾಳುವ 164 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಈ ಸಂಬಂಧ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಬೀರೂರು ಸಿಪಿಐ ಅವರ ನೇತೃತ್ವದ ಪೊಲೀಸರ ತಂಡ ಬೇಧಿಸುವಲ್ಲಿ ಯಶಸ್ವಿಯಾಗಿದೆ.

ಚಿಕ್ಕಮಗಳೂರು : ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 10 ಮಂದಿ ಪೊಲೀಸರ ಬಲೆಗೆ ; ನಗದು ವಶಕ್ಕೆ

ತರೀಕೆರೆ : ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 10 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಅವರ ತನಿಖೆ ಆರಂಭಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 10 ಜನರನ್ನು ಪಿಎಸ್ಐ CEN ಕ್ರೈಂ ಪೊಲೀಸ್ ಠಾಣೆ ಅವರೊಂದಿಗೆ ಠಾಣೆಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ವಶಕ್ಕೆ ಪಡೆದ ಪೊಲೀಸರು ಅವರ ಬಳಿ ಇದ್ದ 15,250 ರೂಪಾಯಿ ನಗದನ್ನು ವಶಕ್ಕೆ ಪಡೆದುಕೊಂಡು ತನಿಖೆ ಆರಂಭಿಸಿದ್ದಾರೆ. ಈ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಪೊಲೀಸರು ಈ ರೀತಿಯ ಜೂಜಾಟದಲ್ಲಿ ಯಾರು ಕೂಡ ಭಾಗಿಯಾದದಂತೆ ತಿಳಿಸಿದ್ದಾರೆ ಹಾಗೂ ಈ ರೀತಿಯ ಚಟುವಟಿಕೆಗಳು ಕಂಡುಬಂದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ಸೂಕ್ತ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿ ವರ್ಗದವರನ್ನು ಇಲಾಖೆಯ ಅಧಿಕಾರಿಗಳು ಪ್ರಶಂಸಿಸಿದ್ದು, ಘಟನೆಯ ಕುರಿತು ತರಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.