ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಶೃಂಗೇರಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆಟೋ ಅವಘಡಗಳು ಸಂಭವಿಸಿರುವ ಘಟನೆ ವರದಿಯಾಗಿದೆ. 

ಇದನ್ನೂ ಓದಿ : ಭೀಕರ ರಸ್ತೆ ಅಪಘಾತ ; ಶೃಂಗೇರಿ ಯುವಕನ ದುರ್ಮರಣ

ಶೃಂಗೇರಿಯ ಹೊರವಲಯದ ವಿದ್ಯಾರಣ್ಯಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಚೀನಗರದ ಸಮೀಪದಲ್ಲಿ ನಿನ್ನೆ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ರಸ್ತೆಯ ಪಕ್ಕದಲ್ಲಿ ಜೋಡಿಸಿಟ್ಟಿದ್ದ ಇಟ್ಟಿಗೆಗಳಿಗೆ ಗುದ್ದಿದೆ, ಅದೃಷ್ಟವಶಾತ್ ಆಟೋ ಚಾಲಕನಿಗೆ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ, ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಆಂಬುಲೆನ್ಸ್ ವಾಹನಕ್ಕೆ ಕರೆ ಮಾಡಿ ಚಾಲಕನನ್ನು ಸುರಕ್ಷಿತವಾಗಿರಿಸುವಲ್ಲಿ ಸಹಕರಿಸಿದ್ದಾರೆ. 

ಶೃಂಗೇರಿಯ ಮೆಣಸೆ ಸಮೀಪದಲ್ಲಿ ಆಟೋ ಅವಘಡ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ  ಪಲ್ಟಿಯಾಗಿದೆ. ಆಟೋ ಚಾಲನೆ ಮಾಡುತ್ತಿದ್ದ ಚಾಲಕ ರಿಯಾಜ್ ಗೆ ಪೆಟ್ಟಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಅದೃಷ್ಟವಶಾತ್ ಆಟೋದಲ್ಲಿ ಬೇರೆ ಯಾರೂ ಪ್ರಯಾಣಿಕರು ಇಲ್ಲದ ಕಾರಣ ಭಾರೀ ಅವಘಡವೊಂದು ತಪ್ಪಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಆತನನ್ನು ಆಟೋದಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಟೋ ಪಲ್ಟಿ ಹೊಡೆದ ಪರಿಣಾಮ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚರಂಡಿಗೆ ಉರುಳಿದೆ.