ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಾಂಧಿಘರ್ ಬಳಿ ಎರಡು ಕಾರುಗಳು ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಡಿಗೆರೆಯ ಲಕ್ಷ್ಮಣಗೌಡ ಎಂಬುವವರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೂ ಕೆಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ : ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಬಾಳೆಹೊನ್ನೂರು ಮೂಲದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದ ಸಚಿವ ಸುನಿಲ್ ಕುಮಾರ್
ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು : https://forms.gle/PvypXpJerzDzsrfE9
ಅಪಘಾತಕ್ಕೀಡಾದ ಒಂದು ಕಾರು ಗೋಣಿಬೀಡು ಕಡೆಗೆ ತೆರಳುತ್ತಿದ್ದು ಇನ್ನೊಂದು ಕಾರು ಬೆಟ್ಟದಮನೆಯ ಕಡೆಗೆ ಸಾಗುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಅಪಘಾತ ಉಂಟಾದ ಸ್ಥಳಕ್ಕೆ ಸ್ಥಳೀಯರು ಧಾವಿಸಿ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡುವಲ್ಲಿ ಸಹಾಯ ಮಾಡಿದ್ದಾರೆ.
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಬಾಳೆಹೊನ್ನೂರು ಮೂಲದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯಮಾಡಿದ ಸಚಿವ ಸುನಿಲ್ ಕುಮಾರ್
ಶೃಂಗೇರಿ / ಕಾರ್ಕಳ : ಬೈಕ್ ನಿಂದ ಬಿದ್ದು ಗಾಯಕ್ಕೀಡಾಗಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡುವ ಮುಖಾಂತರ ಸಚಿವ ಸುನಿಲ್ ಕುಮಾರ್ ಮಾನವೀಯತೆ ಮೆರೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೆಸ್ಕಾಂ ಕಟ್ಟಡ, ಹಾಗೂ ಶೃಂಗೇರಿ ಶಾರದಾಮಾತೆಯ ದರ್ಶನ ಹಾಗೂ ಉಭಯ ಶ್ರೀಗಳ ದರ್ಶನ ಪಡೆದು ಶೃಂಗೇರಿಯಿಂದ ಕಾರ್ಕಳದ ಕಡೆಗೆ ತಮ್ಮ ವಾಹನದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನೋರ್ವ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ, ಯಾರೂ ಸಹಾಯಕ್ಕೆ ಮುಂದೆ ಬಾರದ ಈ ಪರಿಸ್ಥಿತಿಯಲ್ಲಿ ಸಚಿವ ವಿ.ಸುನಿಲ್ ಕುಮಾರ್ ಅವರು ಮಾನವೀಯತೆ ಮೆರೆದು ಆತನನ್ನು ತುರ್ತಾಗಿ ಆಸ್ಪತ್ರೆಗೆ ದಾಖಲು ಮಾಡುವಲ್ಲಿ ಸಹಕರಿಸಿದ್ದಾರೆ.
ಅಪಘಾತಕ್ಕೀಡಾದ ಯುವಕ ಬಾಳೆಹೊನ್ನೂರು ಮೂಲದವನು ಎಂದು ಗುರುತಿಸಲಾಗಿದ್ದು, ಸಚಿವರ ಹಿಂದಿದ್ದ ಬೆಂಗಾವಲು ವಾಹನದಲ್ಲಿ ಆತನನ್ನು ಕಾರ್ಕಳದ ಆಸ್ಪತ್ರೆಗೆ ದಾಖಲು ಮಾಡಿ ಅಗತ್ಯವಾಗಿದ್ದ ಚಿಕಿತ್ಸೆ ದೊರೆಯುವಂತೆ ಸಚಿವ ಸುನಿಲ್ ಕುಮಾರ್ ಮಾಡಿದ್ದಾರೆ.
ಈ ಮಾರ್ಗದಲ್ಲಿ ಸಾಗುತ್ತಿದ್ದ ಅನೇಕರು ಅಪಘಾತವನ್ನು ಸಚಿವರ ಮುಂಚೆಯೇ ಕಂಡರೂ ಕೂಡ ಆತನಿಗೆ ಸಹಾಯ ಮಾಡದೆ ನೋಡುತ್ತಾ ತಮ್ಮಪಾಡಿಗೆ ತೆರಳಿದ್ದರು, ಆದರೆ ಕೂಡಲೇ ಸಹಾಯಕ್ಕೆ ಧಾವಿಸಿದ ಸಚಿವ ಸುನಿಲ್ ಕುಮಾರ್ ಅವರ ಮಾನವೀಯತೆಗೆ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಚಿವರಾಗಿಯೂ ಎಲ್ಲರಂತೆ ಸಹಜವಾಗಿ ಸರಳತೆ ಮೆರೆದು ಸಹಾಯ ಮಾಡಿರುವ ಸುನಿಲ್ ಕುಮಾರ್ ಅವರ ಈ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಇನ್ನೂ ಕೆಲವರು ಈ ದೃಶ್ಯಾವಳಿಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಹಂಚಿಕೊಂಡಿದ್ದಾರೆ.





0 Comments