ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ನಗರಸಭಾ ಅಧ್ಯಕ್ಷರಾದ ವರಸಿದ್ಧಿ ವೇಣುಗೋಪಾಲ್ ಅವರು ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದಾಗಿ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಗನ್ ಮ್ಯಾನ್ ನಿಯೋಜನೆ ಮಾಡಬೇಕೆಂದು ಪತ್ರದ ಮುಖಾಂತರ ಕೋರಿದ್ದಾರೆ.
ನಾನು ಚಿಕ್ಕಮಗಳೂರು ನಗರದ ಪ್ರಥಮ ಪ್ರಜೆಯಾಗಿದ್ದೇನೆ, ಕೆಲ ಕಿಡಿಗೇಡಿಗಳು ತೊಂದರೆ ನೀಡುತ್ತಿದ್ದಾರೆ, ಹಾಗೂ ಅನೇಕ ಬಾರಿ ತನ್ನನ್ನು ಹಿಂಬಾಲಿಸಿ ಛಾಯಾಚಿತ್ರಗಳನ್ನು ತೆಗೆದು ವಾಟ್ಸಪ್ ನಲ್ಲಿ ಹರಿಬಿಡುತ್ತಿರುವ ಕಾರಣ ಸುರಕ್ಷತೆ ನೀಡಿ ಭದ್ರತೆಯ ದೃಷ್ಟಿಯಿಂದ ಗನ್ ಮ್ಯಾನ್ ನ್ನು ನಿಯೋಜಿಸಬೇಕೆಂದು ಕೋರಿದ್ದಾರೆ.
ವರಸಿದ್ಧಿ ವೇಣುಗೋಪಾಲ್ ಅವರು ಚಿಕ್ಕಮಗಳೂರು ನಗರಸಭಾ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡ ಬಳಿಕದಲ್ಲಿ ಅನೇಕ ರೀತಿಯ ವಿವಾದಗಳು ನಗರಸಭೆಯಲ್ಲಿ ಭುಗಿಲೆದ್ದಿತ್ತು. ಕಿಡಿಗೇಡಿಗಳು ತೊಂದರೆ ಕೊಡುತ್ತಿರುವುದು ಗಮನಕ್ಕೆ ಬಂದಿರುವ ಕಾರಣ ಅವರ ಸುರಕ್ಷತೆ ಹಾಗೂ ಭದ್ರತೆಯ ಸಲುವಾಗಿ ಓರ್ವ ಪೊಲೀಸ್ ಗನ್ ಮ್ಯಾನ್ ನ್ನು ನಿಯೋಜನೆ ಮಾಡಿಕೊಡಬೇಕೆಂದು ವರಸಿದ್ಧಿ ವೇಣುಗೋಪಾಲ್ ಅವರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೋರಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು
ಅಕ್ರಮ ಚಟುವಟಿಕೆಗಳ 26 ಅಡ್ಡೆಯ ಮೇಲೆ ಕಾಫಿನಾಡಿನ ಪೊಲೀಸರ ದಾಳಿ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜಿಲ್ಲೆಯ 26 ಕಡೆಗಳಲ್ಲಿ ವಿಶೇಷ ದಾಳಿ ನಡೆಸಿ ಅಕ್ರಮವಾಗಿ ನಡೆಯುತ್ತಿದ್ದ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದಾರೆ ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ 26 ಅಬಕಾರಿ ದಾಳಿ ನಡೆಸಿರುವ ಅಧಿಕಾರಿಗಳು ಕಳ್ಳಭಟ್ಟಿ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಅನೇಕ ಅಡ್ಡೆಗಳ ಮೇಲೆ ದಾಳಿ ನಡೆಸಿ ಅಕ್ರಮದಲ್ಲಿ ಭಾಗಿಯಾದವರನ್ನು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಒಟ್ಟಾರೆ ಈ ದಾಳಿಯಲ್ಲಿ 26 ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು 24,106 ರೂಪಾಯಿ ಹಣ ಅಕ್ರಮ ಮದ್ಯ ಹಾಗೂ 6.5 ಲೀಟರ್ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಪೊಲೀಸರು, ಅಕ್ರಮವಾಗಿ ಈ ರೀತಿಯಾದ ಚಟುವಟಿಕೆಗಳಲ್ಲಿ ಯಾರಾದರೂ ಪಾಲ್ಗೊಂಡಿರುವುದು ಕಂಡುಬಂದಲ್ಲಿ ಕಾನೂನಿನ ಅನುಸಾರ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ರೀತಿ ಚಟುವಟಿಕೆಗಳ ಕುರಿತು ಮಾಹಿತಿ ಇದ್ದವರು ಯಾವುದೇ ಅಂಜಿಕೆ ಇಲ್ಲದೆ ಪೊಲೀಸರಿಗೆ ಮುಕ್ತವಾಗಿ ತಿಳಿಸಬಹುದು ಎಂದು ಮಾಹಿತಿ ನೀಡಿದ್ದಾರೆ.




0 Comments