ಶೃಂಗೇರಿ / ಪುತ್ತೂರು : (ನ್ಯೂಸ್ ಮಲ್ನಾಡ್ ವರದಿ) ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಅಮ್ಮ ಫೌಂಡೇಶನ್ ಸಂಸ್ಥಾಪಕರಾದ ಸುಧಾಕರ ಶೆಟ್ಟಿ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಇದನ್ನೂ ಓದಿ : ಕಾರು ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಅಪಘಾತ

ನಿನ್ನೆ ರಾತ್ರಿ ತಮ್ಮ ಸಹಾಯಕನೊಂದಿಗೆ ಕಾರಿನಲ್ಲಿ ಮಂಗಳೂರಿನ ಕಡೆಗೆ ಪ್ರಯಾಣ ನಡೆಸುತ್ತಿದ್ದಾಗ 11:30 ರ ವೇಳೆಯಲ್ಲಿ ಸುಳ್ಯ ಮತ್ತು ಪುತ್ತೂರಿನ ಮಧ್ಯ ಭಾಗವಾದ ಕಾವು ಗ್ರಾಮದಲ್ಲಿ ಚಾಲಕ ನಿದ್ರೆಗೆ ಜಾರಿದ ಪರಿಣಾಮ ಬೆಂಜ್ ಕಾರು 80 ಅಡಿ ಪ್ರಪಾತಕ್ಕೆ ಉರುಳಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ, 80 ಅಡಿ ಆಳದ ಪ್ರಪಾತಕ್ಕೆ ಕಾರು ಬಿದ್ದಿದ್ದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ಹಾಗೂ ಚಾಲಕ ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.