ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಕಾರ್ಯಾಚರಣೆಯ ಮೂಲಕ ಬಾಳೂರು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣೆಯ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದು ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ವಿನ್ಸಿ ಡಿಸೋಜ ಎಂದು ಗುರುತಿಸಲಾಗಿದ್ದು ಘಟನಾ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ : ಬಾಳೆಹೊನ್ನೂರು : ಭೀಕರ ರಸ್ತೆ ಅಪಘಾತ ; ಬೈಕ್ ಸವಾರ ಸಾವು

ಈ ದಾಳಿಯಲ್ಲಿ ಮೂರು ಸಾವಿರ ರೂಪಾಯಿಗೂ ಅಧಿಕ ಮೌಲ್ಯದ ಮದ್ಯ ದೊರೆತಿದ್ದು ಪೊಲೀಸರು ಆರೋಪಿಯಿಂದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯು ಪಿಎಸೈ ಪವನ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದು ಠಾಣೆಯ ಪೊಲೀಸರು ಸಹ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. 

ತನು ಕೊಟ್ಟಿಗೆಹಾರ, ವರದಿಗಾರರು

ಜೆಸಿಬಿ ಅಡಿಗೆ ಸಿಲುಕಿ 22 ವರ್ಷ ಪ್ರಾಯದ ಯುವಕನ ಸಾವು : 

ಮಡಿಕೇರಿ : ಜೆಸಿಬಿ ವಾಹನದ ಬ್ರೇಕ್ ವಿಫಲಗೊಂಡ ಪರಿಣಾಮ ಕಾರ್ಮಿಕ ವಾಹನದ ಅಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ. 

ಮಡಿಕೇರಿಯ ಕೂಟುಹೊಳೆ ಸಮೀಪ ಈ ದುರ್ಘಟನೆ ಸಂಭವಿಸಿದ್ದು ಸಂತೋಷ್ (22)  ಎಂಬ ಕಾರ್ಮಿಕ ಜೆಸಿಬಿ ಅಡಿಭಾಗಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಜೆಸಿಬಿ ಬ್ರೇಕ್ ವಿಫಲಗೊಂಡ ಪರಿಣಾಮ ಚಾಲಕನ ನಿಯಂತ್ರಣಕ್ಕೆ ವಾಹನ ದೊರೆಯದೆ ಹಿಮ್ಮುಖವಾಗಿ ಇಳಿಜಾರಿನಲ್ಲಿ ಚಲಿಸಿ ಯುವಕನನ್ನು ಬಲಿ ಪಡೆದುಕೊಂಡಿದೆ. 

ವಾಹನ ಚಲಿಸಿದ ತೀವ್ರತೆಗೆ ಮೃತ ಯುವಕನ ಒಂದು ಕಾಲು ದೇಹದಿಂದ ಬೇರ್ಪಟ್ಟಿದೆ. ಯುವಕನು ಹಾಸನ ಮೂಲದ ಸಂತೋಷ್ ಎನ್ನಲಾಗಿದ್ದು ಈ ಅವಘಡದಲ್ಲಿ ಯುವಕ ದಾರುಣವಾಗಿ ಅಂತ್ಯ ಕಂಡಿದ್ದಾನೆ. 

ಘಟನೆಯ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು  ಈ ಸಂಬಂಧ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ.