ಶಿವಮೊಗ್ಗ :(ನ್ಯೂಸ್ ಮಲ್ನಾಡ್ ವರದಿ) ಕಳ್ಳತನದ ಆರೋಪದ ಮೇರೆಗೆ ಪೊಲೀಸರ ವಶದಲ್ಲಿದ್ದ ಕಳ್ಳ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ಇದನ್ನೂ ಓದಿ : ಶೃಂಗೇರಿ : ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆಟೋ ಅವಘಡ
ಮನೆಯ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ ನ್ನು ಕದ್ದಿದ್ದ ಆರೋಪ ಹೊಂದಿದ್ದ ಕಳ್ಳ ಶಿವಮೊಗ್ಗದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸರಿಂದ ಬಂಧಿತನಾಗಿದ್ದ. ಈತ ಶೌಚಾಲಯಕ್ಕೆ ಹೋಗಿ ಬರುವುದಾಗಿ ತೆರಳಿ ಶೌಚಾಲಯದಿಂದ ಹೊರಬಂದ ಕೂಡಲೇ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪೊಲೀಸ್ ಠಾಣೆಯ ಕಾಂಪೌಂಡ್ ನ್ನು ಎಗರಿ ಎಸ್ಕೇಪ್ ಆಗಿದ್ದಾನೆ.
ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು ಆರೋಪಿಯ ಪತ್ತೆಗಾಗಿ ಬಲೆಬೀಸಿದ್ದಾರೆ. ಆತನನ್ನು ಸೆರೆ ಹಿಡಿಯುವ ಸಲುವಾಗಿ ಕಾರ್ಯಾಚರಣೆ ಆರಂಭಿಸಿದ್ದು ಕಳ್ಳನ ಪತ್ತೆ ಕಾರ್ಯವನ್ನು ನಡೆಸುತ್ತಿದ್ದಾರೆ.




0 Comments