ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಬೈಕ್ ಚಾಲನೆ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕನು ದುರ್ಮರಣವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. 

ಇದನ್ನೂ ಓದಿ : ಉದ್ಯಮಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ಕಾರ್ ಅಪಘಾತ 80 ಅಡಿ ಪ್ರಪಾತಕ್ಕೆ ಉರುಳಿದ ಕಾರು

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಅಳೆಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದ್ದು ಬೈಕ್ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತ ದುರ್ದೈವಿಯನ್ನು ಕಳಸದ ಬಾಳೆಹೊಳೆ ಮೂಲದ ವಿಶ್ವನಾಥ್ ಹೊಳ್ಳ (55)  ಎಂದು ಗುರುತಿಸಲಾಗಿದೆ. ತಂದೆಯ ಕಾರ್ಯದ ನಿಮಿತ್ತ ಶಿವಮೊಗ್ಗದಿಂದ ಬಾಳೆಹೊಳೆ ಕಡೆಗೆ ತೆರಳುವಾಗ ಬೈಕ್ ನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. 

ವಾಹನವು ಹೊಂಡಕ್ಕೆ ಉರುಳುವ ಸಂದರ್ಭದಲ್ಲಿ ಮೃತ ವ್ಯಕ್ತಿ ಧರಿಸಿದ್ದ ಹೆಲ್ಮೆಟ್  ಬಳ್ಳಿಗಳಿಗೆ ಸಿಲುಕಿದ ಪರಿಣಾಮ ಬಿಗಿದು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.