ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಇಬ್ಬರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಇನ್ನೋರ್ವ ಬೈಕ್ ಸವಾರನ ಮೇಲೆ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಗೋಣಿಬೀಡು ಆನೇದಿಬ್ಬ ಹತ್ತಿರದಲ್ಲಿ, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬೇರೊಂದು ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಮೇಕನಗದ್ದೆ ಕಿರಣ್ ಎಂಬಾತನ ಮೇಲೆ ಕತ್ತಿಯಿಂದ ಕಡಿದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು : ಅಕ್ರಮವಾಗಿ ಜೂಜಾಟದಲ್ಲಿ ಭಾಗಿಯಾಗಿದ್ದ 08 ಜನ ಪೊಲೀಸರ ಬಲೆಗೆ
ಮೇಕನಗದ್ದೆ ಕಿರಣ್ ಅವರ ಕೈ ಹಾಗೂ ಕಾಲನ್ನು ಕಡಿದು ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಈ ಘಟನೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹಲ್ಲೆಗೀಡಾದ ವ್ಯಕ್ತಿಯನ್ನು ಮೂಡಿಗೆರೆಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗೋಣಿಬೀಡು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ, ಘಟನೆಗೆ ನಿಖರ ಕಾರಣಗಳೇನು ಎಂದು ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ತಿಳಿಯಬೇಕಿದೆ.
ತನು ಕೊಟ್ಟಿಗೆಹಾರ, ವರದಿಗಾರರು
ಕೃಷಿ ಇಲಾಖೆ ಅಧಿಕಾರಿಗಳಿಂದ ರಸಗೊಬ್ಬರ ಮಾರಾಟ ನಡೆಸುವ ಅಂಗಡಿಗಳ ಮೇಲೆ ದಿಢೀರ್ ದಾಳಿ
ಚಿಕ್ಕಮಗಳೂರು : ಮಳೆಗಾಲ ಸಮೀಪಿಸುತ್ತಿದ್ದಂತೆಯೆ ಹೆಚ್ಚಾಗಿ ಕೃಷಿ ಆಧಾರಿತ ಚಟುವಟಿಕೆಗಳು ಆರಂಭವಾಗುವ ಕಾರಣ ರಸಗೊಬ್ಬರಗಳ ಉತ್ಕೃಷ್ಟತೆ ಹಾಗೂ ಅದರ ಸತ್ವ ಪರೀಕ್ಷೆಯನ್ನು ಚಿಕ್ಕಮಗಳೂರಿನಲ್ಲಿ ದಿಢೀರ್ ದಾಳಿಯ ಮೂಲಕ ಕೃಷಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು ನಗರದ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ನಿಯಮ ಉಲ್ಲಂಘನೆ ನಡೆಸಿ ವ್ಯಾಪಾರ ನಡೆಸುತ್ತಿದ್ದ ಒಂದು ಮಳಿಗೆಯನ್ನು ಬಂದ್ ಮಾಡಿಸಿದರು.
ಚಿಕ್ಕಮಗಳೂರು ನಗರದ ಕೆ.ಎಂ ರಸ್ತೆಯಲ್ಲಿರುವ ಗೊಬ್ಬರ ಮಾರಾಟಗಾರರು ರಸಗೊಬ್ಬರದ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿ ವ್ಯಾಪಾರ ನಡೆಸಿದ ಕಾರಣ ಹಾಗೂ ಈ ಕುರಿತಾದ ದಾಖಲೆಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದ ಕಾರಣ ಸ್ಟಾಪ್ ಸೇಲ್ ನೊಟೀಸ್ ನ ಮೂಲಕ ವ್ಯಾಪಾರಕ್ಕೆ ತಡೆ ಹಿಡಿದು ಮಳಿಗೆಯನ್ನು ಒಂದು ದಿನದ ಮಟ್ಟಿಗೆ ಮುಚ್ಚಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಇದಲ್ಲದೇ ನಗರದ ಬಹುತೇಕ ರಸಗೊಬ್ಬರಗಳ ಮಳಿಗೆಗೆ ಭೇಟಿ ನೀಡಿದ ಅವರು ರಸಗೊಬ್ಬರಗಳ ಗುಣಮಟ್ಟ ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. ನಿಯಮ ಉಲ್ಲಂಘನೆ ನಡೆಸಿ ಯಾವುದಾದರೂ ರಸಗೊಬ್ಬರಗಳ ಅಂಗಡಿಯವರು ಮಾರಾಟ ನಡೆಸುವುದು ಮುಂತಾದವುಗಳು ಕಂಡುಬಂದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಉಪವಿಭಾಗದ ಉಪ ಕೃಷಿ ನಿರ್ದೇಶಕರಾದ ಮೋಹನ್ ದಾಸ್, ಜಾಗೃತ ದಳದ ಸಹಾಯಕ ಕೃಷಿ ನಿರ್ದೇಶಕ ವೆಂಕಟೇಶ್ ಚವಾಣ್, ಚಿಕ್ಕಮಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಸುರೇಶ್ ಭಾಗಿಯಾಗಿದ್ದರು.



0 Comments