ಕೊಟ್ಟಿಗೆಹಾರ : ಲಯನ್ಸ್ ಕ್ಲಬ್ ಮೂಡಿಗೆರೆ ವತಿಯಿಂದ ಬಣಕಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. 

ಇದನ್ನೂ ಓದಿ : ಚಿಕ್ಕಮಗಳೂರು : ದುರ್ಗಾದೇವಿಯ ಸೀರೆ ಹರಾಜಿನಲ್ಲಿ ಅಕ್ರಮ ಆರೋಪ ; ಶಿಕ್ಷೆಗೆ ಆಗ್ರಹ

ಮೂಡಿಗೆರೆ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಲ್.ರಂಗನಾಥಗೌಡ ಈ ಕುರಿತು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಅದರಲ್ಲೂ ಬಹುಮುಖ್ಯವಾಗಿ ಆರೋಗ್ಯ ಕ್ಷೇತ್ರದಲ್ಲಿ ತ್ವರಿತ ಮಾಹಿತಿ ಹಾಗೂ ಸೇವೆಯನ್ನು ಪ್ರತಿ ಹಳ್ಳಿಗಳ ಜನರಿಗೆ ತಲುಪಿಸುವಲ್ಲಿ ಎಲ್ಲ ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರ ಸೇವೆ ಅಪಾರವಾಗಿದೆ. ಕೋವಿಡ್ ಸಮಯದಲ್ಲೂ ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ದೂರದ ಹಳ್ಳಿಗಳಿಗೆ ನಡೆದುಕೊಂಡು ಸಾಗಿದ ಉದಾಹರಣೆಗಳು ನಡೆದಿವೆ. ಅವರ ಸೇವೆಯನ್ನು ಸ್ಮರಿಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಾದ ಪವಿತ್ರ, ಸ್ನೇಹ ಮತ್ತು ವಿಮಲಾಕ್ಷಿ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಇಕ್ಲಾಸ್ ಅಹಮದ್, ಗೋಪಾಲಗೌಡ, ದೇವಪ್ಪ, ಪ್ರಭಾಕರ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ತನು ಕೊಟ್ಟಿಗೆಹಾರ, ವರದಿಗಾರರು