ಮೂಡಿಗೆರೆ : ಕಾರ್ ಹಾಗೂ ಕ್ಯಾಂಟರ್ ವಾಹನದ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ. 

ಇದನ್ನೂ ಓದಿ : ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಅತ್ತಿಗೆರೆ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ಎರಡು ವಾಹನಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯಗಳು ಸಂಭವಿಸಿಲ್ಲ. ಎರಡು ವಾಹನಗಳಲ್ಲಿದ್ದವರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಕಾರಿನಲ್ಲಿದ್ದ ಮೂರು ತಿಂಗಳ ಮಗು ಹಾಗೂ ಎರಡು ವರ್ಷದ ಮಗು ಸೇರಿ ನಾಲ್ವರೂ ಕೂಡ ಯಾವುದೇ ಗಾಯಗಳಿಗೀಡಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯು ಬಣಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿದ್ದು, ವಾಹನವು ಮುಖಾಮುಖಿಯಾದ ರಭಸಕ್ಕೆ ಕಾರಿನ ಏರ್ ಬ್ಯಾಗ್ ಓಪನ್ ಆಗಿ ಪ್ರಯಾಣಿಕರು ಸುರಕ್ಷಿತವಾಗಿರುವಂತೆ ಮಾಡಿದೆ. 

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು ಹಾಗೂ ಕ್ಯಾಂಟರ್ ವಾಹನ ಕಾರ್ಕಳದಿಂದ ಚಿಕ್ಕಮಗಳೂರು ಕಡೆಗೆ ತರಕಾರಿ ತರಲು ತೆರಳುತ್ತಿತ್ತು ಎನ್ನಲಾಗಿದೆ.

ತನು ಕೊಟ್ಟಿಗೆಹಾರ, ವರದಿಗಾರರು