ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಇಂದು ಶೃಂಗೇರಿಯ ಅಡ್ಡಗದ್ದೆ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಯೋಜನೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು, ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಈ ಯೋಜನೆಯಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಖುದ್ದಾಗಿ ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡುವ ಯೋಜನೆಯಾಗಿದೆ.
ಇದನ್ನೂ ಓದಿ : ಹರಿಹರಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಶರೀಫ್ ಬಿಜೆಪಿಯಿಂದ ಉಚ್ಛಾಟನೆ
ಆದರೆ ಇಂದು ಶೃಂಗೇರಿಯ ಅಡ್ಡಗದ್ದೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ಇರಲಿಲ್ಲ, ಈ ಹಿಂದೆ ಎರಡು ಬಾರಿ ದಿನಾಂಕ ನಿಗದಿಯಾಗಿ ಕಾರ್ಯಕ್ರಮ ರದ್ಧಾಗಿತ್ತು, ಈಗ ಮೂರನೇ ಬಾರಿ ಕಾರ್ಯಕ್ರಮ ನಿಗದಿಗೊಳಿಸಲಾಗಿತ್ತು. ಸಾರ್ವಜನಿಕರು ತಮ್ಮ ದೂರುಗಳನ್ನು ಕಾರ್ಯಕ್ರಮದ ಎರಡು ದಿನದ ಮುನ್ನ ಸ್ಥಳೀಯ ಗ್ರಾಮ ಪಂಚಾಯಿತಿ ಅಥವಾ ತಾಲೂಕು ಕಛೇರಿ ಮೂಲಕ ಜಿಲ್ಲಾಧಿಕಾರಿಗೆ ತಮ್ಮ ಕುಂದುಕೊರತೆಗಳ ದೂರುಗಳನ್ನು ನೀಡುವಂತೆ ಸೂಚಿಸಲಾಗಿತ್ತು ಆದರೆ ಇಂದಿನ ಕಾರ್ಯಕ್ರಮದಲ್ಲಿ ಸಹ ಜಿಲ್ಲಾಧಿಕಾರಿಗಳು ಭಾಗವಹಿಸಲಿಲ್ಲ.
ಆದರೆ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ".ಯೋಜನೆಯ ಅಡಿಯಲ್ಲಿಯೇ ಕಾರ್ಯಕ್ರಮ ನಡೆಸಲಾಗಿದೆ. ಇದೊಂದು ಕಾಟಾಚಾರದ ಕಾರ್ಯಕ್ರಮ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ




0 Comments