ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಮೀನು ಹಿಡಿಯಲು ತೆರಳಿ ನೀರಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿರುವ ಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಶವವು ನೀರಿನಲ್ಲಿ ತೇಲುತ್ತಿರುವುದನ್ನು ಕಂಡ ಮೀನುಗಾರರು ಈ ಕುರಿತಾಗಿ ತಿಳಿಸಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದ್ದು ಈ ಕುರಿತಾಗಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಶೃಂಗೇರಿ: "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ" ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೇ ಇರಲಿಲ್ಲ

ಘಟನಾ ಸ್ಥಳಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಯನ್ನು ಮುಗಿಸಿ ಮೃತನ ಶರೀರವನ್ನು ಕುಟುಂಬವರ್ಗದವರಿಗೆ ಹಸ್ತಾಂತರ ಮಾಡುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು. 

ಘಟನಾ ಸಂಬಂಧ ಮೃತನ ಸಂಬಂಧಿಕರು ಹಾಗೂ ಪೋಷಕರು ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದು ಅಗಲಿದ ಗೆಳೆಯನಿಗೆ ಸ್ನೇಹಿತರು ಭಾವುಕರಾಗಿ ವಿದಾಯ ಹೇಳಿದ್ದಾರೆ.