ತರೀಕೆರೆ : (ನ್ಯೂಸ್ ಮಲ್ನಾಡ್ ವರದಿ) ಬಸ್ ಹಾಗೂ ಓಮಿನಿ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಓಮಿನಿ ಕಾರಿನ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ತರೀಕೆರೆಯಲ್ಲಿ ನಿನ್ನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿಯ ಜಿಲ್ಲಾ ಗಡಿಯಲ್ಲಿ ಖಾಸಗೀ ಬಸ್ಸು ಹಾಗೂ ಓಮಿನಿ ಕಾರಿನ ನಡುವೆ ಸಂಭವಿಸಿದ ಈ ರಸ್ತೆ ಅಪಘಾತದಲ್ಲಿ ಓಮಿನಿ ಕಾರನ್ನು ಚಾಲನೆ ಮಾಡುತ್ತಿದ್ದ ಚಾಲಕ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ (42) ವರ್ಷ ಪ್ರಾಯದ ಮೂರ್ತಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಕಾಫಿನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು ; ಬೈಕ್ ಚಾಲನೆ ಮಾಡುತ್ತಿದ್ದಾತನನ್ನು ಕಡಿದು ಎಸ್ಕೇಪ್ ಆದ ದುಷ್ಕರ್ಮಿಗಳು
ಭದ್ರಾವತಿಯಿಂದ ತರೀಕೆರೆಯ ಸಂಬಂಧಿಕರ ಮನೆಗೆ ತೆರಳುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಓಮಿನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕ ದಾರುಣವಾಗಿ ಅಂತ್ಯ ಕಂಡಿದ್ದಾನೆ. ಅಪಘಾತ ಸಂಭವಿಸಿದ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಸ್ಥರು ಹಾಗೂ ಅವರ ಪರಿಚಯಸ್ಥರು ಅತೀವವಾದ ನೋವನ್ನು ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು : ಅಕ್ರಮವಾಗಿ ಜೂಜಾಟದಲ್ಲಿ ಭಾಗಿಯಾಗಿದ್ದ 08 ಜನ ಪೊಲೀಸರ ಬಲೆಗೆ
ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 08 ಜನರನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ ಏಳು ಜನರನ್ನು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಅವರ ಬಳಿಯಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಅಜ್ಜಂಪುರ ನಗರದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಓರ್ವನನ್ನು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ ಒಟ್ಟು 9825 ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಅಧಿಕಾರಿಗಳು ಅಕ್ರಮವಾಗಿ ಈ ರೀತಿಯ ಚಟುವಟಿಕೆಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡು ಬಂದಲ್ಲಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣೆಯ ಪೊಲೀಸರು ಭಾಗಿಯಾಗಿ ದಾಳಿ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.



0 Comments