ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಕೊಪ್ಪದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ ಒತ್ತಾಯಿಸಿದರು.
ಇದನ್ನೂ ಓದಿ : ಪೊಲೀಸರಿಗೆ ಸವಾಲೆಸೆದಿದ್ದ ನರಸಿಂಹರಾಜಪುರ ತಾಲೂಕು ಕಛೇರಿ ಸಿಬ್ಬಂದಿ ಅಂದರ್
ಲೋಕದ ಜ್ಞಾನವನ್ನು ಹೊಂದದೇ ಇರುವ ವ್ಯಕ್ತಿ ರೋಹಿತ್ ಚಕ್ರತೀರ್ಥ ಅವರು ಬಿಜೆಪಿ ಮತ ಬ್ಯಾಂಕ್ ಗೆ ಪೂರಕವಾಗುವಂತೆ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ. ಅವರಿಗೆ ರಾಷ್ಟ್ರಕವಿ ಕುವೆಂಪು ಅವರ ವಿಚಾರಗಳು ಬೇಕಿಲ್ಲ, ಇಂತಹ ವಿಷಬೀಜ ಬಿತ್ತುವ ವ್ಯಕ್ತಿಗಳನ್ನು ಅಂತಹ ದೊಡ್ಡ ಸ್ಥಾನದಲ್ಲಿ ಕೂರಿಸಿ ಪಠ್ಯ ಪರಿಷ್ಕರಣೆ ನಡೆಸುವಂತೆ ಮಾಡಿರುವುದು ಸರಿಯಲ್ಲ ಎಂಬುದಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ವಾಗ್ದಾಳಿ ನಡೆಸಿದರು.
ಕಲಿಯುವ ಮಕ್ಕಳಿಗೆ ಉತ್ತಮ ಜ್ಞಾನಾರ್ಜನೆಗೆ ಸಹಕಾರಿಯಾಗುವ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಕೆ ಮಾಡುವ ಬದಲು ಮನಸ್ಸಿಗೆ ಕೋಮು ಭಾವನೆಗಳು ವ್ಯಕ್ತವಾಗುವ ರೀತಿಯಲ್ಲಿ ವಿಷಬೀಜವನ್ನು ಬಿತ್ತುತ್ತಿರುವುದು ಸರಿಯಲ್ಲ ಇದಲ್ಲದೇ ಕುವೆಂಪು ಅವರ ವಿಚಾರಗಳು ಬೇಕಿಲ್ಲ ಎಂಬ ಅವರ ನಡವಳಿಕೆ ಅತ್ಯಂತ ಖಂಡನಾರ್ಹ ಎಂದರು.
ಆದಿಚುಂಚನಗಿರಿ ಮಠದ ಪೂಜ್ಯ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಗಳು ಆತನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ, ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹಂ.ಪ ನಾಗರಾಜಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರವನ್ನು ಕ್ರಮಕ್ಕಾಗಿ ಆಗ್ರಹಿಸಿದ್ದಾರೆ. ಅಂತೆಯೇ ರಾಜ್ಯದ ಅನೇಕ ಗಣ್ಯರು ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಪಡಿಸಿದರು ಕೂಡ ಸರ್ಕಾರ ಬೌದ್ಧಿಕ ದಿವಾಳಿತನವನ್ನು ತೋರುತ್ತಿರುವುದು ಸರಿಯಲ್ಲ ಎಂಬುದಾಗಿ ಈ ಸಂದರ್ಭದಲ್ಲಿ ತಿಳಿಸಿದರು ಹಾಗೂ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದರು.




0 Comments