ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಮಗಳಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆಯೊಡ್ಡಿ, ಹಲ್ಲೆಗೈಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ವಿದ್ಯುತ್ ತಗುಲಿ ಸಾವನ್ನಪ್ಪಿದ ಆನೆ ; ಮಳೆಯಿಂದ ಉಂಟಾದ ಅವಘಡ
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಮಗಳಾದ ರಾಜನಂದಿನಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿ ಮಂಜುನಾಥ್ ಹಲ್ಲೆಗೈಯ್ಯಲು ಯತ್ನಿಸಿದ್ದಾನೆ, ಹಾಗೂ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದಲ್ಲದೇ ಕಾರು ಚಾಲಕನ ಮೇಲೂ ಹಲ್ಲೆಗೆ ಯತ್ನಿಸಿದ್ದು ಈ ಸಂಬಂಧ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜನಂದಿನಿಯವರು ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ.
ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು : https://forms.gle/PvypXpJerzDzsrfE9
ಯಾವ ಕಾರಣಕ್ಕಾಗಿ ರಾಜ ನಂದಿನಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಹಾಗೂ ಕೊಲೆ ಬೆದರಿಕೆ ಹಾಕಿದ್ದಾನೆ ಎಂಬ ಮಾಹಿತಿ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಮೂಡಿಗೆರೆ : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮೂಡಿಗೆರೆ : ಅಪರಿಚಿತ ವ್ಯಕ್ತಿಯೋರ್ವರ ಶವ ಹೇಮಾವತಿ ನದಿಯ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮೂಡಿಗೆರೆ ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಶವವು ಪತ್ತೆಯಾಗಿದ್ದು ಶ್ರೀಧರ್ ಎಂಬ ಹೆಸರಿನಲ್ಲಿ ಬರೆದಿರುವ ಡೆತ್ ನೋಟ್ ಪೊಲೀಸರಿಗೆ ಲಭ್ಯವಾಗಿದೆ.
ಮೃತ ದೇಹವನ್ನು ಪ್ರಾಣಿಗಳು ತಿಂದಿರುವ ಶಂಕೆಯಿದ್ದು, ಕೊಲೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಏಪ್ರಿಲ್ 27 ರ ದಿನಾಂಕವನ್ನು ನಮೂದಿಸಿ ಬರೆದಿರುವ ಡೆತ್ ನೋಟ್ ಮೃತದೇಹದಲ್ಲಿ ಲಭ್ಯವಾಗಿದ್ದು ಬಣಕಲ್ ಠಾಣೆಯ ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ.
ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದು ತನಿಖೆಯ ನಂತರ ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.




0 Comments