ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಕೊಪ್ಪದಲ್ಲಿ ಉಚಿತ ದಂತ ತಪಾಸಣಾ ಹಾಗೂ ಉಚಿತ ಚಿಕಿತ್ಸಾ ಶಿಬಿರವು ನಡೆಯಿತು.

ಇದನ್ನೂ ಓದಿ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸೂಪರ್ ವೈಸರ್ ಎಸಿಬಿ ಅಧಿಕಾರಿಗಳ ಬಲೆಗೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಈ ಶಿಬಿರವು ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಮಂಗಳೂರು ಹಾಗೂ ಶ್ರೀ ಶಾರದಾ ಧನ್ವಂತರಿ ಆಸ್ಪತ್ರೆ ಶೃಂಗೇರಿ ಇವರ ಆಶ್ರಯದಲ್ಲಿ ನಡೆಯಿತು. ಈ ಶಿಬಿರದಲ್ಲಿ 300 ಕ್ಕೂ ಅಧಿಕ ಜನರು ಪಾಲ್ಗೊಂಡು ತಮ್ಮ ಸಮಸ್ಯೆಯ ಕುರಿತು ವೈದ್ಯರಲ್ಲಿ ತಿಳಿಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡರು. 

ಶಿಬಿರದಲ್ಲಿ ಪಾಲ್ಗೊಂಡ 100 ಕ್ಕೂ ಅಧಿಕ ರೋಗಿಗಳಿಗೆ ಸ್ಥಳದಲ್ಲಿಯೇ ದಂತಕ್ಕೆ ಸಂಬಂಧಿಸಿದ ಎಲ್ಲಾ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಾರ್ವಜನಿಕ ಆಸ್ಪತ್ರೆ ಕೊಪ್ಪದಲ್ಲಿ ನಡೆದ ಈ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಾನವಿ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಮಹೇಂದ್ರ ಕಿರೀಟಿ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಶ್ರೀನಿವಾಸ್ ಮತ್ತು ಎ.ಬಿ ಶೆಟ್ಟಿ ಕಾಲೇಜಿನ 25 ಕ್ಕಿಂತಲೂ ಹೆಚ್ಚು ದಂತವೈದ್ಯರು ಉಪಸ್ಥಿತರಿದ್ದರು.

ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವ ಸಂದರ್ಭದಲ್ಲಿ ಕಾಡಾನೆಯ ದುರ್ಮರಣ 

ಕೊಡಗು : ನಾಡಿಗೆ ಬಂದಿದ್ದ ಕಾಡಾನೆಯೊಂದನ್ನು ಮರಳಿ ಕಡಿಗಟ್ಟುವ ಕಾರ್ಯಾಚರಣೆ ನಡೆಯುವ ವೇಳೆಯಲ್ಲಿ ಅನೆಯೊಂದು ದಾರುಣವಾಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. 

ಮಡಿಕೇರಿ ತಾಲೂಕಿನ ಮರಂದೋಡ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಸಾರ್ವಜನಿಕರ ಸಹಕಾರದೊಂದಿಗೆ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು  ಆರಂಭಿಸಿ ಕಾರ್ಯಾಚರಣೆ ನಡೆಸುತ್ತಿದ್ದರು. 

ಮಧ್ಯಾಹ್ನದ ವೇಳೆಯಲ್ಲಿ ಗೋಚರಿಸಿದ ಒಂಟಿ ಸಲಗವನ್ನು ಸೆರೆ ಹಿಡಿಯುವ ಸಲುವಾಗಿ ಬಂದೂಕಿನಿಂದ ಅರವಳಿಕೆ ಮದ್ದನ್ನು ಹಾರಿಸಲಾಯಿತು. ಈ ಸಮಯದಲ್ಲಿ ಕುಸಿದು ಬಿದ್ದ ಆನೆ ಮೃತಪಟ್ಟಿದೆ. 

ಈ ದುರ್ಘಟನೆಗೆ ಅರವಳಿಕೆ ಮದ್ದಿನ ಓವರ್ ಡೋಸ್ ಅಥವಾ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರಬಹುದೆಂದು  ಅಂದಾಜಿಸಲಾಗಿದೆ. ಘಟನಾ ಸಂಬಂಧ ಅಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಆನೆಯ ಸಾವಿಗೆ ನಿಖರ ಕಾರಣಗಳೇನು ಎಂಬ ಕುರಿತು  ಮಾಹಿತಿಯನ್ನು ನೀಡುವುದಾಗಿ ತಿಳಿಸಿದ್ದಾರೆ. 

ಈ ಭಾಗದ ಅನೇಕ ಕಾರ್ಮಿಕರನ್ನು ಆನೆ ದಾಳಿ ನಡೆಸಿ ಬಲಿ ಪಡೆದುಕೊಂಡಿದೆ. ಅನೇಕ ರೈತರ ತೋಟಗಳಿಗೆ ನುಗ್ಗಿ ಅವರು ಬೆಳೆದ ಬೆಳೆಯನ್ನು ನಾಶಪಡಿಸಿದೆ. ಈ ನಿಟ್ಟಿನಲ್ಲಿ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯು ನಡೆಯುತ್ತಿತ್ತು