ಮಡಿಕೇರಿ : (ನ್ಯೂಸ್ ಮಲ್ನಾಡ್ ವರದಿ) ವ್ಯಕ್ತಿಯೋರ್ವ ಬೈಕ್ ನ ಮೂಲಕ ತೆರಳುವ ಸಂದರ್ಭದಲ್ಲಿ ಆತನ ಮೇಲೆ ಕಾಡಾನೆ ದಾಳಿ ನಡೆಸಿ ಆತನನ್ನು ಬಲಿ ಪಡೆದುಕೊಂಡಿರುವ ದುರ್ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಇದನ್ನೂ ಓದಿ : ಶೃಂಗೇರಿ ಮಠದ ಪದ್ಮನಾಭ ಅವಧಾನಿಗಳು ಅಸ್ತಂಗತ
ಮಡಿಕೇರಿಯ ಪೊನ್ನಂಪೇಟೆ ತಾಲ್ಲೂಕಿನ ಕೋಣನಕಟ್ಟೆ- ಮರಪಾಲ ತಿತಿಮತಿ ರಸ್ತೆಯಲ್ಲಿ ಇಂದು ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ. ಈ ದಾಳಿಗೆ ತುತ್ತಾದ ಮಾರಿಯಮ್ಮ ಕಾಲೋನಿಯ ಚಾಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆಯು ಇಂದು ಬೆಳಗ್ಗೆ 07 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ನಿನ್ನೆಯಷ್ಟೇ ಕಾಡಾನೆ ಶ್ರೀಮಂಗಲ ಸಮೀಪದ ಬೀರುಗದಲ್ಲಿ ಹಾಲಪ್ಪ ಎಂಬುವವರ ಮೇಲೆ ದಾಳಿ ನಡೆಸಿ ಅವರು ತೀವ್ರವಾಗಿ ಗಾಯಗೊಳ್ಳುವಂತೆ ಮಾಡಿತ್ತು.
ಆನೆ ದಾಳಿಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ತೋಟ ಗದ್ದೆಗಳಲ್ಲಿ ಕೆಲಸ ಮಾಡಲು ಹೆಚ್ಚಿನ ಆತಂಕವಿದೆ, ಈ ಭಾಗದ ಅನೇಕರನ್ನು ಆನೆ ಬಲಿ ಪಡೆದುಕೊಂಡಿದೆ. ಈ ಕುರಿತು ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕೆಂದು ಕೋರಿದ್ದಾರೆ.





0 Comments