ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಲಂಚ ಪಡೆಯುತ್ತಿದ್ದ ವೇಳೆ ಮೂಡಿಗೆರೆಯ ತಾಲೂಕು ಕಛೇರಿ ಸೂಪರ್ವೈಸರ್ ಓರ್ವನನ್ನು ಹಣ ಪಡೆಯುವ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ : ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಸ್ಮಶಾನದಲ್ಲಿ ಶವವಾಗಿ ಪತ್ತೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಕಛೇರಿಯಲ್ಲಿ ಸೂಪರ್ ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ ಎಂಬ ಅಧಿಕಾರಿಯು, ಗೋಣಿಬೀಡು ಗ್ರಾಮದ ಮಹೇಶ್ ಎಂಬುವವರಿಂದ ಬರೋಬ್ಬರಿ ಒಂದು ಲಕ್ಷ ರೂಪಾಯಿ ಹಣ ಪಡೆಯುವಾಗ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಪ್ರಕಾಶ್ ನ್ನು ಸೆರೆಹಿಡಿದಿದ್ದಾರೆ.
ಈ ಕಾರ್ಯಾಚರಣೆಯು ಮೂಡಿಗೆರೆಯ ತಾಲೂಕು ಕಛೇರಿ ಬಳಿಯಲ್ಲಿ ನಡೆದಿದ್ದು, ಎಸಿಬಿ ಎಸ್ಪಿ ಸೈಮನ್, ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ಭಾಗಿಯಾಗಿದ್ದರು.
ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವ ಸಂದರ್ಭದಲ್ಲಿ ಕಾಡಾನೆಯ ದುರ್ಮರಣ :
ಕೊಡಗು : ನಾಡಿಗೆ ಬಂದಿದ್ದ ಕಾಡಾನೆಯೊಂದನ್ನು ಮರಳಿ ಕಡಿಗಟ್ಟುವ ಕಾರ್ಯಾಚರಣೆ ನಡೆಯುವ ವೇಳೆಯಲ್ಲಿ ಅನೆಯೊಂದು ದಾರುಣವಾಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಮಡಿಕೇರಿ ತಾಲೂಕಿನ ಮರಂದೋಡ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಸಾರ್ವಜನಿಕರ ಸಹಕಾರದೊಂದಿಗೆ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಆರಂಭಿಸಿ ಕಾರ್ಯಾಚರಣೆ ನಡೆಸುತ್ತಿದ್ದರು.
ಮಧ್ಯಾಹ್ನದ ವೇಳೆಯಲ್ಲಿ ಗೋಚರಿಸಿದ ಒಂಟಿ ಸಲಗವನ್ನು ಸೆರೆ ಹಿಡಿಯುವ ಸಲುವಾಗಿ ಬಂದೂಕಿನಿಂದ ಅರವಳಿಕೆ ಮದ್ದನ್ನು ಹಾರಿಸಲಾಯಿತು. ಈ ಸಮಯದಲ್ಲಿ ಕುಸಿದು ಬಿದ್ದ ಆನೆ ಮೃತಪಟ್ಟಿದೆ.
ಈ ದುರ್ಘಟನೆಗೆ ಅರವಳಿಕೆ ಮದ್ದಿನ ಓವರ್ ಡೋಸ್ ಅಥವಾ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸಂಬಂಧ ಅಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಆನೆಯ ಸಾವಿಗೆ ನಿಖರ ಕಾರಣಗಳೇನು ಎಂಬ ಕುರಿತು ಮಾಹಿತಿಯನ್ನು ನೀಡುವುದಾಗಿ ತಿಳಿಸಿದ್ದಾರೆ.
ಈ ಭಾಗದ ಅನೇಕ ಕಾರ್ಮಿಕರನ್ನು ಆನೆ ದಾಳಿ ನಡೆಸಿ ಬಲಿ ಪಡೆದುಕೊಂಡಿದೆ. ಅನೇಕ ರೈತರ ತೋಟಗಳಿಗೆ ನುಗ್ಗಿ ಅವರು ಬೆಳೆದ ಬೆಳೆಯನ್ನು ನಾಶಪಡಿಸಿದೆ. ಈ ನಿಟ್ಟಿನಲ್ಲಿ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯು ನಡೆಯುತ್ತಿತ್ತು.ಈ ಸಂಬಂಧ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.




0 Comments