ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಮರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಳು ಸಂಗ್ರಹದಿಂದ ಅಕ್ರಮವಾಗಿ ಮರಳು ಸಾಗಣೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಶೃಂಗೇರಿಯ ಮರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮರಳು ಲಾಟ್ ನಿಂದ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ನೂತನ್ ಕುಮಾರ್ ಎಂಬುವವರು ಅನುಮತಿ ಇಲ್ಲದೆ ಮರಳು ಗಣಿಗಾರಿಕೆ ಮಾಡಿದ್ದಾರೆ ಎಂದು ಮರ್ಕಲ್ ಪಂಚಾಯಿತಿ ಸದಸ್ಯರಾದ ಪ್ರಶಾಂತ್ ಅವರು ಆರೋಪಿಸಿದ್ದಾರೆ.
ನಿಯಮದ ಪ್ರಕಾರ ಜೆ.ಸಿ.ಬಿ ಬಳಸುವಂತಿಲ್ಲ, ಹಾಗೆಯೇ ಗ್ರಾಮ ಪಂಚಾಯಿತಿಯಿಂದ ಯಾವುದೇ ಅನುಮತಿ ಪಡೆಯದೆ, ಗಮನಕ್ಕೆ ತಾರದೆ ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ನೂತನ್ ಕುಮಾರ್ ಅವರು ಮರಳು ಗಣಿಗಾರಿಕೆ ಮಾಡಿದ್ದಾರೆ, ಇದಕ್ಕೆ ಪಂಚಾಯಿತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು. ಈ ಕುರಿತು ದೂರು ನೀಡಲು ಸಿದ್ದತೆ ನಡೆಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
.jpg)



0 Comments