ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಹಳದಿ ಅಲರ್ಟ್​  ಘೋಷಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಮೂಡಿಗೆರೆ ಬಳಿ ಭೀಕರ ರಸ್ತೆ ಅಪಘಾತ ; ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ, ಇನ್ನಿಬ್ಬರ ಸ್ಥಿತಿ ಗಂಭೀರ

ಮಲೆನಾಡು ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು ಮೋಡ ಮುಸುಕಿದ ವಾತಾವರಣವಿದೆ. ಜೂನ್ 21 ರಿಂದ ಜೂನ್ 24ರವರೆಗೆ ರಾಜ್ಯಾದ್ಯಂತ ನಿರಂತರ ಮಳೆಯಾಗಲಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 24ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗಲಿದೆ. ಆ ಬಳಿಕದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. 

ಇಂದಿನಿಂದ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ನಿರೀಕ್ಷೆಯಿದೆ. ಜೂ.22ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಜೂನ್ 23ರವರೆಗೆ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ. 

ಕೃಷಿ ಕಾರ್ಯಗಳಲ್ಲಿ ತೊಡಗುವ ಕೃಷಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅತೀ ಹೆಚ್ಚಿನ ಮಳೆಯಾಗುವ ಸಂದರ್ಭದಲ್ಲಿ ಕೆಲಸದಲ್ಲಿ ಮಗ್ನರಾಗದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.