ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಆನೆಯ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. 

ಇದನ್ನೂ ಓದಿ :  ಮೂಡಿಗೆರೆ : ಡ್ರಾಪ್ ಕೊಡುವ ನೆಪದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕನ ಬಂಧನ

ಚಿಕ್ಕಮಗಳೂರು ಸಮೀಪದ ಅಲ್ಲಂಪುರ ವ್ಯಾಪ್ತಿಯಲ್ಲಿ ಒಮಿನಿ ಕಾರಿನ ಮೂಲಕ ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐದು ಜನರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಆರ್.ಶಿವಕುಮಾರ್, ಸುಂದರೇಶ್, ಪಿ.ಮಹಾಂತೇಶ್, ನೂರ್ ಅಹಮದ್, ಆಂಜನಪ್ಪ ಬಂಧಿತರು. ಈ ಕಾರ್ಯಾಚರಣೆಯನ್ನು ಅರಣ್ಯ ಸಂಚಾರಿದಳದ ಸಿಐಡಿ ಪೊಲೀಸರು ನಡೆಸಿದ್ದು ಭದ್ರಾ ವನ್ಯಜೀವಿ ವಲಯದಿಂದ ಆನೆದಂತವನ್ನು ತಂದಿರುವುದನ್ನು ಖಚಿತಪಡಿಸಿದ್ದಾರೆ.

ಈ ಐವರು ಬಂಧಿತರನ್ನು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸುವಂತೆ ಕೋರ್ಟ್ ಆದೇಶಿಸಿದ್ದು ಪೊಲೀಸರು ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಬಂಧಿತರಿಂದ ಆನೆ ದಂತ ಹಾಗೂ ಕೃತ್ಯಕ್ಕೆ ಬಳಸಿಕೊಂಡಿದ್ದ ಓಮ್ನಿ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿವೈಡರ್ ಗೆ ಗುದ್ದಿದ ಆಟೋ ; ಮಹಿಳೆ ಸಾವು

ಕಡೂರು : ಡಿವೈಡರ್ ಗೆ ಆಟೋ ಗುದ್ದಿದ ಪರಿಣಾಮ ಮಹಿಳೆಯೋರ್ವರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಕಡೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಡಿವೈಡರ್ ಗೆ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದ್ದು ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ 43 ವರ್ಷ ಪ್ರಾಯದ ಸೌಭಾಗ್ಯ ಎಂಬುವವರು ದುರ್ಮರಣಕ್ಕೀಡಾಗಿದ್ದಾರೆ. 

ಅಪಘಾತದ ತೀವ್ರತೆಗೆ ಆಟೋದಲ್ಲಿದ್ದ ಗೆಳತಿಯರಾದ ಚಂದನಾ ಹಾಗೂ ಸೌಭಾಗ್ಯ ಇಬ್ಬರ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿತ್ತು. ಪ್ರಾಥಮಿಕ ಚಿಕಿತ್ಸೆಗಾಗಿ ಅವರನ್ನು ಕಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೌಭಾಗ್ಯ ಅವರು ಕೊನೆಯುಸಿರೆಳೆದಿದ್ದಾರೆ. 

ಅಪಘಾತಕ್ಕೀಡಾದ ಚಂದನಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.