ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಪಿಕಪ್ ವಾಹನ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೋರ್ವರು ದುರ್ಮರಣವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಸ್ಕೂಲ್ ಟ್ರಿಪ್ ವಾಹನಕ್ಕೆ ಗುದ್ದಿದ ಇನೋವಾ ಕಾರು; ಅದೃಷ್ಟವಶಾತ್ ಮಕ್ಕಳು ಪಾರು
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹುಲುಸೆ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು 45 ವರ್ಷ ಪ್ರಾಯದ ಅಶ್ವಿನಿ ಎಂಬ ಶಾಲಾ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಅಶ್ವಿನಿ ಅವರು ನೇರುಗಳಲೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕಿ ಮೃತಪಟ್ಟಿರುವುದನ್ನು ಕಂಡು ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಶಾಲಾ ಮಕ್ಕಳು ಹಾಗೂ ಸಿಬ್ಬಂದಿಗಳು ನೆಚ್ಚಿನ ಶಿಕ್ಷಕಿಯನ್ನು ಕಳೆದುಕೊಂಡಿರುವ ದುಃಖದಲ್ಲಿ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.




0 Comments