ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ್ಯಂತ ಅನೇಕ ಅಧಿಕಾರಿಗಳ ಮನೆಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಚಿಕ್ಕಮಗಳೂರು ಜಿಲ್ಲೆಯ ಅಧಿಕಾರಿಗಳ ಮನೆಗಳಿಗೆ ದಾಳಿ ನಡೆಸುವುದನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ : ಶೃಂಗೇರಿ : ಹಸುವಿಗೆ ಲಾರಿಯಿಂದ ಗುದ್ದಿ ಎಸ್ಕೇಪ್ ಆಗಲು ಯತ್ನಿಸಿದವರಿಂದಲೇ ಅಂತ್ಯ ಸಂಸ್ಕಾರ ಮಾಡಿಸಿದ ಗ್ರಾಮಸ್ಥರು

ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿರುವ SDA ಅಧಿಕಾರಿ ತಿಮ್ಮಯ್ಯ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು ತಿಮ್ಮಯ್ಯ ಅವರಿಗೆ ಸಂಬಂಧಿಸಿದ ಅವರ ತಂದೆಯ ಬಸೂರು ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಲ್ಲದೆ ತಿಮ್ಮಯ್ಯ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಜಂಪುರ ಪುರಸಭೆ ಕಚೇರಿ ಮೇಲೂ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಆದಾಯಕ್ಕಿಂತ 80 ಲಕ್ಷಕ್ಕೂ ಅಧಿಕ ಹಣ ಗಳಿಸಿರುವ ಆರೋಪ ತಿಮ್ಮಯ್ಯ ಅವರ ಮೇಲಿತ್ತು, ಈ ಸಂಬಂಧ ದಾಳಿನಡೆಸಿರುವ ಎಸಿಬಿ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. 

ಅಧಿಕಾರಿಗಳು ಸಂಪೂರ್ಣ ಪರಿಶೀಲನೆಯ ನಂತರ ಈ ಕುರಿತಾದ ಹೆಚ್ಚಿನ ಮಾಹಿತಿ ದೊರೆಯಲಿದೆ. 

ತನು ಕೊಟ್ಟಿಗೆಹಾರ, ವರದಿಗಾರರು