ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಪೊಲೀಸರು ಆರೋಪಿಯನ್ನು ಬಂಧಿಸಲೆಂದು ತೆರಳಿದಾಗ ಪೊಲೀಸರಿಗೇ ಚೂರಿ ಇರಿದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಇದನ್ನೂ ಓದಿ : ಕಳಪೆ ಕಾಮಗಾರಿಯಿಂದ ಸೇತುವೆ ಕುಸಿತ ; ಸಾರ್ವಜನಿಕರ ಆರೋಪ
ಹಳೇ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಚಾಕು ಇರಿತ ನಡೆದಿದೆ.
ಶಿವಮೊಗ್ಗದ ದೊಡ್ಡಪೇಟೆ ಠಾಣೆಯ ಸಿಬ್ಬಂದಿಗಳಾದ ಗುರುನಾಯ್ಕ್ ಹಾಗೂ ರಮೇಶ್ ಹಲ್ಲೆಗೊಳಗಾದವರು. ಪೊಲೀಸರು ಬಂಧಿಸಲೆಂದು ತೆರಳಿದ ಸಂದರ್ಭದಲ್ಲಿ ಶಾಹೀದ್ ಖುರೇಷಿ ಎಂಬ ರೌಡಿ ಶೀಟರ್ ಪೊಲೀಸ್ ಪೇದೆಯ ಎದೆಗೆ ಚಾಕು ಇರಿದಿದ್ದಾನೆ. ಪೊಲೀಸರು ಪುನಃ ಹಿಡಿಯಲು ತೆರಳಿದಾಗ ಮತ್ತೆ ಲಾಂಗು ಬೀಸಿದ ಪರಿಣಾಮ ಜೀವ ರಕ್ಷಣೆಯ ಸಲುವಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.
ಗಾಯಗೊಂಡಿರುವ ಇಬ್ಬರು ಪೊಲೀಸರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸಹ್ಯಾದ್ರಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ಎಸ್ಪಿ ಲಕ್ಷ್ಮೀಪ್ರಸಾದ್ ಪೊಲೀಸ್ ಸಿಬ್ಬಂದಿಗಳಾದ ಗುರುನಾಯ್ಕ್ ಹಾಗೂ ರಮೇಶ್ ಅವರ ಆರೋಗ್ಯ ವಿಚಾರಣೆ ನಡೆಸಿದರು.




0 Comments